ಮಂಗಳೂರು: ಮುಡಾದ ಕುಂಜತ್ ಬೈಲ್ ಲೇಔಟ್ ಆಸುಪಾಸಿನ ಸಾರ್ವಜನಿಕರು ರಸ್ತೆ ಸಂಪರ್ಕದ ಕುರಿತು ಸಲ್ಲಿಸಿದ ಬೇಡಿಕೆಗೆ ಸ್ಪಂದಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ರಸ್ತೆ ಸಂಪರ್ಕದ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಅಲ್ಲದೆ, ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಪವರ್ ಸ್ಟೇಷನ್ ಸ್ಥಾಪಿಸುವಂತೆ ಸ್ಥಳದಲ್ಲೇ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮುಡಾ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.



