ಮಂಗಳೂರು: ಏಕನಿವೇಶನ ವಿನ್ಯಾಸಕ್ಕೆ ಅನುಮೋದನೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಗಳನ್ನು ಪರಿಗಣಿಸುವ ಕುರಿತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಏಕನಿವೇಶನ ವಿನ್ಯಾಸ ಅನುಮೋದನೆ ಪ್ರಕ್ರಿಯೆಯಲ್ಲಿ ಸಾರ್ವಜನಿಕ ರಸ್ತೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಪರಿಗಣಿಸುವುದು, ರಸ್ತೆ ಸಂಪರ್ಕದ ವಿಚಾರದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು ಹಾಗೂ ಅನುಮೋದನೆ ನೀಡುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಾರ್ವಜನಿಕ ರಸ್ತೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಪಾಲಿಸುವುದು ಮತ್ತು ಅನುಮೋದನಾ ಪ್ರಕ್ರಿಯೆಯಲ್ಲಿ ಅಗತ್ಯ ಕ್ರಮಗಳನ್ನು ಅನುಸರಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಮುಡಾ ಆಯುಕ್ತರು, ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ಉಪಸ್ಥಿತರಿದ್ದರು.



