ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ (ಬೋರ್ವೆಲ್) ಕೊರೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ರೈತರಿಗೆ ಗರಿಷ್ಠ ₹4.75 ಲಕ್ಷದವರೆಗೆ ಸಹಾಯಧನ ಒದಗಿಸಲಾಗುತ್ತದೆ.
ಈ ಯೋಜನೆಯಡಿ 1.20 ಎಕರೆಗಳಿಂದ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಕೊಳವೆಬಾವಿ ಕೊರೆದು, ವಿದ್ಯುದೀಕರಣದೊಂದಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ರೈತರಿಗೆ ₹4.75 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಜಿಲ್ಲೆಗಳ ರೈತರಿಗೆ ₹3.75 ಲಕ್ಷದವರೆಗೆ ಸಹಾಯಧನ ದೊರೆಯಲಿದೆ. ಈ ಮೊತ್ತದಲ್ಲಿ ₹50,000 ಸಾಲದ ರೂಪದಲ್ಲಿ ಒಳಗೊಂಡಿರುತ್ತದೆ. ಆಸಕ್ತ ಮತ್ತು ಅರ್ಹ ರೈತರು ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.




