ಮುಲ್ಕಿ: ಮುಲ್ಕಿ ತಾಲೂಕು ಪಂಚಾಯತ್ನ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 3, 2026ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ VB-G RAM G ಯೋಜನೆ, ತೆರಿಗೆ ವಸೂಲಾತಿ, ವಸತಿ ಯೋಜನೆಗಳ ಪ್ರಗತಿ, 15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳ ಪ್ರಗತಿ ಹಾಗೂ ಸಾಮಾಜಿಕ ಪರಿಶೋಧನಾ ವರದಿಯ ಬಾಕಿ ಖಂಡಿಕೆಗಳ ತೀರುವಳಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸ್ವಚ್ಛ ಭಾರತ್ ಮಿಷನ್ (SBM), ಇ-ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧರಣೆ ಪಟ್ಟಿ ನಮೂನೆ 11(ಎ) ಮತ್ತು 11(ಬಿ) ದಾಖಲೆಗಳ ನಿರ್ವಹಣೆ, ಭೂ ಗ್ಯಾರಂಟಿ ಯೋಜನೆಯಡಿ ಅಭಿಯಾನ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ಹಾಗೂ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಉಪಸ್ಥಿತರಿದ್ದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, VB-G RAM G ಸಿಬ್ಬಂದಿ, ಎನ್ಆರ್ಎಲ್ಎಂ ಸಿಬ್ಬಂದಿ ಹಾಗೂ ವಸತಿ ಯೋಜನೆಯ ಸಿಬ್ಬಂದಿ ಭಾಗವಹಿಸಿದ್ದರು.




