ಬಂಟ್ವಾಳ: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಆದಷ್ಟು ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದರು.
ಪ್ರಜಾ ಸೇವಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶವಿದ್ದು, ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 75 ವಿವಿಧ ಅರ್ಜಿಗಳು ಹಾಗೂ ಅಹವಾಲುಗಳು ಸ್ವೀಕೃತಗೊಂಡವು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಂತಿ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೋಯಿರಡ್ಡಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಶ್ವನಾಥ್ ಮುದದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ವಂದಿಸಿದರು.




