ಕುಶಾಲನಗರ: ಹೊರರಾಜ್ಯಗಳಿಂದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಆಗಮಿಸುವ ಪ್ರವಾಸಿ ಬಸ್ಗಳಲ್ಲಿ ಅಕ್ರಮವಾಗಿ ಡಿಜೆ ಸೌಂಡ್ ಸಿಸ್ಟಮ್ ಅಳವಡಿಸಿ, ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಮೂರು ಬಸ್ಗಳ ವಿರುದ್ಧ ಕುಶಾಲನಗರ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪ್ರವಾಸಿ ಬಸ್ಗಳನ್ನು ತಡೆದು ಪರಿಶೀಲಿಸಿದ ಸಂದರ್ಭದಲ್ಲಿ ಅತಿಯಾದ ಶಬ್ದ ಉಂಟುಮಾಡುವ ಡಿಜೆ ಸೌಂಡ್ ಸಿಸ್ಟಮ್ ಅಳವಡಿಸಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮೂರು ಬಸ್ಗಳಿಗೆ ಒಟ್ಟು 4,500 ರೂ. ದಂಡ ವಿಧಿಸಲಾಗಿದೆ.
ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುವ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.



