ಸವಣೂರು: ಪ್ರತೋದಯ ಅರ್ಬನ್ ವಿವಿಧೋದ್ದೇಶ ಸಹಕಾರ ಸಂಘದ ರಜತ ಮಹೋತ್ಸವದ ಅಂಗವಾಗಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಂಘದ ನೂತನ ಕೇಂದ್ರ ಕಚೇರಿ, ಸಭಾಂಗಣ ಹಾಗೂ ವಾಣಿಜ್ಯ ಸಂಕೀರ್ಣದ ಕಟ್ಟಡ ‘ಸಹಕಾರ ರಶ್ಮಿ’ ಉದ್ಘಾಟನೆ ಮತ್ತು ರಜತ ಮಹೋತ್ಸವ ಸಮಾರಂಭ ನವೆಂಬರ್ 16ರಂದು ಸವಣೂರಿನಲ್ಲಿ ನಡೆಯಲಿದೆ ಎಂದು ಸವಣೂರು ಸೀತಾರಾಮ ರೈ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು 25 ವರ್ಷಗಳ ಸಹಕಾರಿ ಸೇವೆಯನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ನೂತನ ಕಟ್ಟಡದ ಉದ್ಘಾಟನೆಯೊಂದಿಗೆ ಸಹಕಾರಿ ಕ್ಷೇತ್ರದ ಸಾಧನೆ, ಸಂಘದ ಬೆಳವಣಿಗೆ ಹಾಗೂ ಮುಂದಿನ ಯೋಜನೆಗಳನ್ನು ಪರಿಚಯಿಸುವ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ರಜತ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
2002ರಲ್ಲಿ ಪ್ರಾರಂಭಗೊಂಡ ಸಂಘವು ಕಳೆದ 25 ವರ್ಷಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದು, ವಿವಿಧ ಸೇವಾ ಚಟುವಟಿಕೆಗಳ ಮೂಲಕ ಜನರ ವಿಶ್ವಾಸ ಗಳಿಸಿದೆ. ಸಂಘದ ಬೆಳವಣಿಗೆಯಲ್ಲಿ ಸಹಕರಿಸಿದ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳ ಸಹಕಾರವನ್ನು ಸ್ಮರಿಸುವ ಉದ್ದೇಶದಿಂದ ರಜತ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
Previous Article
ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ದುರವಸ್ಥೆ ಖಂಡಿಸಿ ಬೃಹತ್ ಪ್ರತಿಭಟನೆ
ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ದುರವಸ್ಥೆ ಖಂಡಿಸಿ ಬೃಹತ್ ಪ್ರತಿಭಟನೆ

