ಭಾರತದ ಹೆಸರಾಂತ ಪರಿಸರವಾದಿ ಹಾಗೂ ‘ಗ್ರೀನ್ ಹೀರೋ ಆಫ್ ಇಂಡಿಯಾ’ ಎಂದೇ ಗುರುತಿಸಿಕೊಂಡಿರುವ ಡಾ. ರಾಧಾಕೃಷ್ಣ ನಾಯರ್ ಅವರು ಕರಾವಳಿ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸಮುದ್ರ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿವಿಧ ಪರಿಸರ ಸ್ನೇಹಿ ಪರಿಹಾರೋಪಾಯಗಳ ಕುರಿತು ಚರ್ಚಿಸಿದ್ದಾರೆ. ಸಮುದ್ರ ಕೊರೆತದಿಂದ ಕರಾವಳಿ ಪ್ರದೇಶಗಳ ಜನವಸತಿ, ಕೃಷಿಭೂಮಿ ಹಾಗೂ ನೈಸರ್ಗಿಕ ಸಂಪತ್ತಿಗೆ ಉಂಟಾಗುತ್ತಿರುವ ಹಾನಿಯನ್ನು ತಡೆಯಲು ವೈಜ್ಞಾನಿಕ ಅಧ್ಯಯನ ಮತ್ತು ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕೆಂದು ಅವರು ಅಭಿಪ್ರಾಯಪಟ್ಟರು. ಕರಾವಳಿ ಸಂರಕ್ಷಣೆಯಲ್ಲಿ ಸ್ಥಳೀಯ ಪರಿಸರ ವ್ಯವಸ್ಥೆ, ಸಸ್ಯಸಂಪತ್ತು ಹಾಗೂ ಹಸಿರು ಹೊದಿಕೆಯ ಮಹತ್ವವನ್ನು ಅವರು ವಿವರಿಸಿದರು. ಸಮುದ್ರ ಕೊರೆತ ಸಮಸ್ಯೆಗೆ ತಾತ್ಕಾಲಿಕ ಕ್ರಮಗಳ ಬದಲಾಗಿ ದೀರ್ಘಕಾಲೀನ ಮತ್ತು ಸುಸ್ಥಿರ ಪರಿಹಾರ ಅಗತ್ಯವೆಂದು ಪ್ರತಿಪಾದಿಸಿದರು.




