ಮಂಗಳೂರು: ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದಿರುವ ಸಚಿವ ಯು.ಟಿ. ಖಾದರ್ ಅವರ ಜನಪರ ಕಾಳಜಿ ಅಭಿನಂದನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು ತಿಳಿಸಿದ್ದಾರೆ.
ಕ್ಯಾನ್ಸರ್ ಚಿಕಿತ್ಸೆಯ ಜೀವ ರಕ್ಷಕ ಔಷಧಿಗಳ ಬೆಲೆ ಕಡಿಮೆ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿರುವ ಸಚಿವರ ಮಾನವೀಯ ನಡೆ ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರದ ಕ್ರಮದಿಂದ 137 ಕ್ಯಾನ್ಸರ್ ಔಷಧಿಗಳು ಸೇರಿದಂತೆ ಒಟ್ಟು 543 ಔಷಧಿಗಳ ಬೆಲೆ ಇಳಿಕೆಯಾಗಿರುವುದು ರೋಗಿಗಳಿಗೆ ಸಮಾಧಾನಕರ ಸಂಗತಿಯಾಗಿದೆ ಎಂದಿದ್ದಾರೆ.
ಬಡವರು, ದಲಿತರು ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ದುಬಾರಿ ಚಿಕಿತ್ಸೆಯ ವೆಚ್ಚ ದೊಡ್ಡ ಹೊರೆಯಾಗಿದೆ. ಆರೋಗ್ಯ ಸೇವೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೈಗೆಟುಕುವ ದರದಲ್ಲಿ ದೊರೆಯಬೇಕು. ಜನರ ಸಂಕಷ್ಟದ ಸಮಯದಲ್ಲಿ ಅವರ ಪರವಾಗಿ ಧ್ವನಿ ಎತ್ತಿ ಪರಿಹಾರಕ್ಕೆ ಪ್ರಯತ್ನಿಸುವುದೇ ನಿಜವಾದ ರಾಜಧರ್ಮ ಎಂದು ದಿನೇಶ್ ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Previous Article
ಶಿವಮೊಗ್ಗ ಡಿಸಿ ಕಚೇರಿ ಮುಂದೆ ಹೈಡ್ರಾಮಾ: ನ್ಯಾಯಕ್ಕಾಗಿ ಮರವೇರಿದ ರೈತ
ಶಿವಮೊಗ್ಗ ಡಿಸಿ ಕಚೇರಿ ಮುಂದೆ ಹೈಡ್ರಾಮಾ: ನ್ಯಾಯಕ್ಕಾಗಿ ಮರವೇರಿದ ರೈತ

