ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್, ವಿಬಿಜಿ ರಾಮ್ ಜಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM), ವಸತಿ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಪರಿಶೀಲನೆ ನಡೆಸಲಾಯಿತು.
ಯೋಜನೆಗಳ ಪ್ರಗತಿ, ಅನುಷ್ಠಾನದಲ್ಲಿರುವ ಸಮಸ್ಯೆಗಳು ಹಾಗೂ ಬಾಕಿ ಇರುವ ಕಾರ್ಯಗಳ ಕುರಿತು ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳು, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಯೋಜನೆಗಳ ಸಂಯೋಜಕರು, ಸಮಾಲೋಚಕರು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು.




