ಮಂಗಳೂರು: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಟೋಲ್ ಗೇಟ್ ಬಳಿ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಶಾಂತಿಯುತ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ಮುಖಂಡ ಅನ್ವರ್ ಸಾದತ್, ಕಳೆದ ಹಲವು ವರ್ಷಗಳಿಂದ ಟೋಲ್ ವಿರುದ್ಧ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಟೋಲ್ ತೆರವುಗೊಳಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.
ಮುಖಂಡ ರಿಯಾಝ್ ಕಡಂಬು ಮಾತನಾಡಿ, ಟೋಲ್ ವಿರೋಧಿ ಪೋಸ್ಟರ್ಗಳನ್ನು ತೆರವುಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಜಿಲ್ಲೆಯ ಜನರನ್ನು ಒಗ್ಗೂಡಿಸಿ ಟೋಲ್ ಗೇಟ್ಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎಸ್ಡಿಪಿಐ ಜಿಲ್ಲಾ ಹಾಗೂ ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



