ಪುತ್ತೂರು: ಛತ್ತೀಸ್ಗಢದ ರಾಯ್ಪುರದಲ್ಲಿ ನವೆಂಬರ್ 14ರಿಂದ 21ರವರೆಗೆ ನಡೆಯಲಿರುವ ಬಿಸಿಸಿಐ ಅಂಡರ್-23 ಮಹಿಳಾ ಟಿ-20 ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅನಘಾ ಕೆ.ಎನ್. ಆಯ್ಕೆಯಾಗಿದ್ದಾರೆ.
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಅನಘಾ, ಈ ಹಿಂದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದರು. ಇದೀಗ ಕ್ರಿಕೆಟ್ನಲ್ಲಿಯೂ ರಾಜ್ಯ ತಂಡಕ್ಕೆ ಆಯ್ಕೆಯಾಗುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಅನಘಾ ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಪುತ್ತೂರಿನ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.



