ಬಂಟ್ವಾಳ: ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಅರ್ಹರಿಗೆ ಉಚಿತ ಕಾನೂನು ನೆರವು ಮತ್ತು ಸಲಹೆ ನೀಡುವುದು ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್. ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯತ್ನ ಎಸ್ಜಿಎಸ್ವೈ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ, ಕಡಿಮೆ ಖರ್ಚಿನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಇಲ್ಲಿ ಕೋರ್ಟ್ ಶುಲ್ಕವಿಲ್ಲದೆ, ವಕೀಲರ ಕಡ್ಡಾಯ ಹಾಜರಾತಿಯೂ ಇಲ್ಲದೆ ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಸುಚಿತ್ರಾ ಕೆ. ಅವರು ಉಚಿತ ಕಾನೂನು ನೆರವು ಪಡೆಯಲು ಅರ್ಹ ವರ್ಗದವರು ತಮ್ಮ ಸಮೀಪದ ಜಿಲ್ಲಾ ಅಥವಾ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು. ಇದಕ್ಕೆ ಯಾವುದೇ ಶುಲ್ಕವಿಲ್ಲ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ದಯಾನಂದ ರೈ, ಹರಿಣಿ ಕುಮಾರಿ ಡಿ., ಸಚಿನ್ ಕುಮಾರ್, ಸಂದೀಪ್ ಕುಮಾರ್ ಶೆಟ್ಟಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
Next Article
ಬಂಟ್ವಾಳದಲ್ಲಿ ರೈತರಿಗೆ ಕೃಷಿ ತರಬೇತಿ ಕಾರ್ಯಾಗಾರ
ಬಂಟ್ವಾಳದಲ್ಲಿ ರೈತರಿಗೆ ಕೃಷಿ ತರಬೇತಿ ಕಾರ್ಯಾಗಾರ
