ನವದೆಹಲಿ: ಸಾವಿನ ಬೆದರಿಕೆ ಎದುರಾದರೂ ತವರಿಗೆ ಮರಳಲು ಸಿದ್ಧಳಿದ್ದೇನೆ ಎಂದು ಬಾಂಗ್ಲಾದೇಶದ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಡಿಸೆಂಬರ್ನಲ್ಲಿ ಬಾಂಗ್ಲಾದೇಶಕ್ಕೆ ಮರಳುವುದಾಗಿ ಅವರು ಸೋಮವಾರ (ನ.16) ಎಎಫ್ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
2024ರಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಪರಿಣಾಮವಾಗಿ 15 ವರ್ಷಗಳ ಸುದೀರ್ಘ ಆಡಳಿತ ಅಂತ್ಯಗೊಂಡ ಬಳಿಕ ಶೇಖ್ ಹಸೀನಾ ದೇಶ ತೊರೆದು ಭಾರತಕ್ಕೆ ಬಂದಿದ್ದರು. 2024ರ ಆಗಸ್ಟ್ನಲ್ಲಿ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಅವರು ಅಂದಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ, ತಲೆಮರೆಸಿಕೊಂಡಿದ್ದಾರೆ.
ಪ್ರತಿಭಟನಾಕಾರರ ವಿರುದ್ಧ ನಡೆದ ಮಾರಕ ದಮನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾನವೀಯತೆಯ ವಿರುದ್ಧದ ಅಪರಾಧ ಎಸಗಿದ ಆರೋಪದಲ್ಲಿ ಬಾಂಗ್ಲಾದೇಶದ ನ್ಯಾಯಾಲಯ ಕಳೆದ ವರ್ಷ ಅವರನ್ನು ದೋಷಿ ಎಂದು ತೀರ್ಪು ನೀಡಿ, ಗೈರುಹಾಜರಿಯಲ್ಲಿ ಮರಣದಂಡನೆ ವಿಧಿಸಿತ್ತು.
ಮರಣದಂಡನೆ ಶಿಕ್ಷೆ ಹಾಗೂ ಜೀವ ಬೆದರಿಕೆಯ ನಡುವೆಯೂ ಸ್ವದೇಶಕ್ಕೆ ಮರಳುವ ನಿರ್ಧಾರವನ್ನು ಹಸೀನಾ ಪ್ರಕಟಿಸಿರುವುದು ಬಾಂಗ್ಲಾದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.




