ಬೆಳಗಾವಿ: ಅಥಣಿಯಲ್ಲಿ ನಡೆದ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ, ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್ ಕತ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕುತೂಹಲ ಮೂಡಿಸಿದೆ.
ಸೋಮವಾರ ಅಥಣಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದ ರೈತ ಭವನದಲ್ಲಿ ಸಹಕಾರ ಸಪ್ತಾಹ ಹಾಗೂ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಾಮಫಲಕ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗಮನಾರ್ಹ ಸಂಗತಿಯೆಂದರೆ, ಸಚಿವ ಸತೀಶ್ ಜಾರಕಿಹೊಳಿ ಅವರು ಅಂದು ಬೆಳಗಾವಿಯಲ್ಲೇ ಇದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ್ದರು. ಆದರೂ ಅಥಣಿಯ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಆದರೆ, ರಮೇಶ್ ಕತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರೇ ಜಿಲ್ಲೆಯ ಪ್ರಮುಖ ಸಹಕಾರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಾಗೂ ರಮೇಶ್ ಕತ್ತಿ ಅವರ ಉಪಸ್ಥಿತಿ ರಾಜಕೀಯವಾಗಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಇದು ಕೇವಲ ಕಾರ್ಯಕ್ರಮಗಳ ನಡುವಿನ ಸಮಯದ ಹೊಂದಾಣಿಕೆಯ ಸಮಸ್ಯೆಯೇ ಅಥವಾ ಇದರ ಹಿಂದೆ ಯಾವುದಾದರೂ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ.
Previous Article
ಆಕಾಶಭನವದಲ್ಲೊಂದು ಸುಂದರ ರುದ್ರಭೂಮಿ.
ಆಕಾಶಭನವದಲ್ಲೊಂದು ಸುಂದರ ರುದ್ರಭೂಮಿ.

