ಧಾರವಾಡ : ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ 45ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ಮಾನ್ ಬಿ. ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಧಾರವಾಡ ಇವರ ನೇತೃತ್ವದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಹಿರಿಯ ಕ್ರೀಡಾಪಟುಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಉಸ್ಮಾನ್ ಅವರು ತಮ್ಮ ಚುರುಕು ಓಟದ ಮೂಲಕ ಗಮನ ಸೆಳೆದು ಬೆಳ್ಳಿ ಸ್ಥಾನ ಗಳಿಸಿದರು.
34 ನೆಕ್ಕಿಲಾಡಿ ಗ್ರಾಮದ ಆದರ್ಶನಗರದ ಮೂಲದ ಉಸ್ಮಾನ್ ಬಿ. ಪ್ರಸ್ತುತ ಸತ್ತಿಕಲ್ಲಿನಲ್ಲಿ ವಾಸವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಪ್ರಿಯ ಉಬಾರ್ ಲೆಜೆಂಡ್ಸ್ ಕ್ರಿಕೆಟ್ ತಂಡದ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಅವರ ಕ್ರೀಡಾ ಸಾಧನೆಗೆ ಕುಟುಂಬದವರು, ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ತಂಡದ ಆಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.




