ಮಂಗಳೂರು: ಸಹಕಾರಿ ಸಪ್ತಾಹದ ಅಂಗವಾಗಿ ಪತ್ರಿಕಾ ರಂಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಪ್ರೆಸ್ಕ್ಲಬ್ ಅಧ್ಯಕ್ಷ ಹಾಗೂ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರು ಆಯ್ಕೆಯಾಗಿದ್ದಾರೆ.
ಪತ್ರಿಕಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.