ಮಂಗಳೂರು: ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಆಲ್ಸ್ಟೈನ್ ಕ್ಲೈವ್ ಡಿ ಕುನ್ಹ ಅವರು ನೇಮಕಗೊಂಡಿದ್ದು, ನವೆಂಬರ್ 16ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಆದೇಶದ ಪ್ರತಿಯನ್ನು ಹಸ್ತಾಂತರಿಸುವ ಮೂಲಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಈ ಹಿಂದೆ ಸುರೇಂದ್ರ ಬಿ. ಕಂಬಳಿ ಅವರು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.


