ಮಂಗಳೂರು: ನಂತೂರಿನ ಪಡುವಾ ಎಜುಕೇಶನಲ್ ಇನ್ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾದ ‘ಸ್ಪೋರ್ಟ್ ಮೀಟ್ 2026’ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.



