Author: navabharatha
ಮಂಗಳೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನೀರಿನ ಮಿತಬಳಕೆ ಮತ್ತು ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡದೆ ಮಿತವಾಗಿ ಬಳಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸೂಚಿಸಿದರು. ಕುಡಿಯುವ ನೀರು ಪೂರೈಕೆ ಹಾಗೂ ಅಗತ್ಯ ಕಾಮಗಾರಿಗಳಿಗಾಗಿ ಜಿಲ್ಲಾಧಿಕಾರಿ ಮತ್ತು ತಾಲೂಕು ತಹಸೀಲ್ದಾರರ ಖಾತೆಗಳಲ್ಲಿ ಈಗಾಗಲೇ ಸಾಕಷ್ಟು ಅನುದಾನ ಲಭ್ಯವಿದೆ. ಅನುದಾನ ಕೊರತೆಯಾದಲ್ಲಿ ಹೆಚ್ಚುವರಿ…
ಮಂಗಳೂರು, ನ.1: ಕನ್ನಡಾಭಿಮಾನವು ಇತರ ಭಾಷಿಗರನ್ನು ದೂರವಿಡುವ ಶಕ್ತಿಯಾಗದೆ, ಎಲ್ಲರನ್ನೂ ಪ್ರೀತಿ ಮತ್ತು ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ನಗರದ ನೆಹರು ಮೈದಾನದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಅಸ್ಮಿತೆ, ಸಂಸ್ಕೃತಿ ಮತ್ತು ಬದುಕಿನ ಅವಿಭಾಜ್ಯ ಅಂಗ. ಪಂಪ, ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಕುವೆಂಪು ಸೇರಿದಂತೆ ಮಹನೀಯರ ಸಾಹಿತ್ಯ ಮತ್ತು ಚಿಂತನೆಗಳು ಮಾನವೀಯತೆ, ಸಮಾನತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ. ಕನ್ನಡಕ್ಕೆ ದೊರೆತಿರುವ ಎಂಟು ಜ್ಞಾನಪೀಠ ಪ್ರಶಸ್ತಿಗಳು ಭಾಷೆಯ ಸಾಹಿತ್ಯಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ ಎಂದರು. ಇಂದಿನ ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ ಮತ್ತು ಡಿಜಿಟಲ್ ಯುಗದಲ್ಲಿ ಕನ್ನಡವೂ ಸಕ್ರಿಯವಾಗಿ ಬೆಳೆಯಬೇಕು. ಕನ್ನಡದ ಸಾಹಿತ್ಯ, ಉಪಭಾಷೆ, ಜನಪದ ಜ್ಞಾನವನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವುದರ ಜೊತೆಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಕನ್ನಡದ ಬಳಕೆಯನ್ನು ವಿಸ್ತರಿಸಬೇಕು ಎಂದು ಹೇಳಿದರು. ನಾಡಧ್ವಜಕ್ಕೆ…
ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ
ಕಾಸರಗೋಡು: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಿ, ಮುಂದಿನ ಬಜೆಟ್‌ನಲ್ಲಿ ಘೋಷಿಸುವಂತೆ ಕೇರಳ ಸರಕಾರಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮನವಿ ಮಾಡಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇರಳ ರಾಜ್ಯ ಘಟಕದ ಸಹಯೋಗದಲ್ಲಿ ನ.1ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಮನವಿ ಮಾಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ಕನ್ನಡ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಾಸ ಸಂಕೀರ್ತನಕಾರ ಹಾಗೂ ಹರಿದಾಸ ಜಯಾನಂದ ಕುಮಾರ ಕಾಸರಗೋಡು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕನ್ನಡಪರ ಸಂಘ-ಸಂಸ್ಥೆಗಳ ಸದಸ್ಯರು ಸ್ವಯಂಪ್ರೇರಿತರಾಗಿ ಕನ್ನಡ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಕರೆ ನೀಡಿದರು.…
ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಮಂಗಳೂರು: ನಗರದ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು. ಸಚಿವ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 120 ಮಂದಿ ಸಾಧಕರು ಹಾಗೂ 53 ಸಂಘ-ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಸಮಾರಂಭದ ಅಂಗವಾಗಿ ಪೊಲೀಸ್, ಎನ್‌ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2026ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಯ ಎಂಬಿಎ, ಎಂಸಿಎ ಹಾಗೂ ಎಂ.ಟೆಕ್ ಕೋರ್ಸುಗಳ ಪ್ರವೇಶಕ್ಕಾಗಿ ಮತ್ತೊಂದು ಕೊನೆಯ ಸುತ್ತಿನ ಕೌನ್ಸೆಲಿಂಗ್ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅಕ್ಟೋಬರ್ 31ರಿಂದ ಹೆಚ್ಚುವರಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಅಕ್ಟೋಬರ್ 13ರಿಂದ 15ರವರೆಗೆ ಆಯ್ಕೆ ದಾಖಲಿಸಿ, ಸೀಟು ಹಂಚಿಕೆಯಾದರೂ ಸಂಬಂಧಿತ ಕಾಲೇಜಿನಲ್ಲಿ ಪ್ರವೇಶ ಪಡೆಯದ ಅಭ್ಯರ್ಥಿಗಳಿಗೆ ಅಕ್ಟೋಬರ್ 31ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪಡೆದ ಬಳಿಕ ಆಸಕ್ತ ಅಭ್ಯರ್ಥಿಗಳು ಸೀಟು ಮೇಲ್ದರ್ಜೆಗೇರಿಸುವ (ಅಪ್‌ಗ್ರೇಡೇಷನ್) ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಆದರೆ ಸೀಟು ಹಂಚಿಕೆಯಾಗಿದ್ದರೂ ಪ್ರವೇಶ ಪಡೆಯದ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಪ್ರಮುಖ ವೇಳಾಪಟ್ಟಿ: ಅ.31ರಿಂದ ನ.3ರವರೆಗೆ: ಕಾಷನ್ ಡೆಪಾಸಿಟ್ ಪಾವತಿ. ಅ.31ರ ಮಧ್ಯಾಹ್ನ 2ರಿಂದ ನ.4ರ ಮಧ್ಯಾಹ್ನ 2ರವರೆಗೆ: ಹೊಸದಾಗಿ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ…
ಇರ್ವತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಇರ್ವತ್ತೂರು ಗ್ರಾಮ ಪಂಚಾಯತ್ ವತಿಯಿಂದ ಕೊಳಲ ಬಾಕಿಮಾರಿನಿಂದ ಮುಂಡಬೈಲುವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ನಿಕಟಪೂರ್ವ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಪ್ರಕೃತಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸಮಾಜ ಸೇವಾ ಕ್ಷೇತ್ರದಲ್ಲಿ ಆದರ್ಶ ಚಾರಿಟೇಬಲ್ ಟ್ರಸ್ಟ್‌ನ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಅವರ ಹೆಸರಿನ ಎದುರು ಉಡುಪಿ ಜಿಲ್ಲೆಯ ಬದಲು ಉತ್ತರ ಕನ್ನಡ ಎಂದು ನಮೂದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ, ತಾಂತ್ರಿಕ ದೋಷದಿಂದಾಗಿ ತಪ್ಪಾಗಿ ಹೆಸರು ಪ್ರಕಟವಾಗಿದೆ ಎಂದು ತಿಳಿಸಿ, ಅವರ ಹೆಸರನ್ನು ಕೈಬಿಟ್ಟು ಉತ್ತರ ಕನ್ನಡ ಜಿಲ್ಲೆಯ ಗಜಾನನ ಉಮಾಮಹೇಶ್ವರ ಭಟ್ (ಜಿ.ಯು. ಭಟ್) ಅವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿತು. ಜಿ.ಯು. ಭಟ್ ಅವರು ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.…
ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ನ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ
ಕಾಸರಗೋಡು: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇರಳ ರಾಜ್ಯ ಘಟಕದ ಸಹಯೋಗದಲ್ಲಿ ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕಳೆದ 36 ವರ್ಷಗಳಿಂದ ನಿರಂತರವಾಗಿ ನವೆಂಬರ್ 1ರಂದು ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕನ್ನಡ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಕನ್ನಡಪರ ಸಂಘ-ಸಂಸ್ಥೆಗಳು ಹಾಗೂ ಕನ್ನಡಿಗರು ಸ್ವಯಂಪ್ರೇರಿತರಾಗಿ ಕನ್ನಡ ಪ್ರತಿಜ್ಞೆ ಕೈಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ. ‘ಕನ್ನಡ ನನ್ನ ಭಾಷೆ, ಕನ್ನಡ ಸಂಸ್ಕೃತಿಯ ಬಗ್ಗೆ ನನಗೆ ಅಭಿಮಾನವಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುತ್ತೇನೆ. ಅವುಗಳನ್ನು ಉಳಿಸಿ ಬೆಳೆಸಲು ಸದಾ ಸಿದ್ಧನಿದ್ದೇನೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂಬ ಪ್ರತಿಜ್ಞೆಯನ್ನು ಸ್ವಯಂಪ್ರೇರಿತರಾಗಿ ಸ್ವೀಕರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ಕೇರಳ ಸರಕಾರಕ್ಕೆ ಮನವಿ…
ಮಂಗಳೂರು: ಭಾರತೀಯ ಅಂಚೆ ಇಲಾಖೆಯ ಮೂಲಕ ಗ್ರಾಹಕರಿಗೆ ವಿವಿಧ ನೂತನ ಸೇವಾ ಸೌಲಭ್ಯಗಳು ಲಭ್ಯವಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಪಾಂಡೇಶ್ವರ ಅಂಚೆ ಕೇಂದ್ರದ ಹಿರಿಯ ಅಧಿಕಾರಿ ಲೋಕನಾಥ್ ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಅಂಚೆ ಇಲಾಖೆಯ ಮೂಲಕ ಆಧಾರ್ ನೋಂದಣಿ, ತಿದ್ದುಪಡಿ, ಅಂಚೆ ವಿಮೆ ಹಾಗೂ ವಿವಿಧ ಆರೋಗ್ಯ ವಿಮಾ ಯೋಜನೆಗಳ ಸೌಲಭ್ಯಗಳು ಲಭ್ಯವಿವೆ. ಕಡಿಮೆ ಮೊತ್ತದಲ್ಲಿ, ಕನಿಷ್ಠ ದಾಖಲೆಗಳೊಂದಿಗೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶವಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂ.ವರೆಗಿನ ಅಪಘಾತ ವಿಮಾ ಯೋಜನೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ…
