Author: navabharatha
ಮಂಗಳೂರು: ಮಧ್ವಾಚಾರ್ಯರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕರು. ಅವರು ಬಡವ ಬಲ್ಲಿದ ಭೇದವಿಲ್ಲದೆ ಜಾತಿ ಧರ್ಮವ ಮೀರಿ ಎಲ್ಲರ ಏಳಿಗೆಯನ್ನು ಬಯಸುತ್ತಿದ್ದರು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಹೇಳಿದರು.ಬು ಧವಾರ ನಗರದ ತುಳುಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತತ್ವವಾದ ಸಿದ್ದಾಂತ ಪ್ರತಿಪಾದಕ ಮಧ್ವಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಡುಪಿಯ ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ರಾಜಗೋಪಾಲಾಚಾರ್ ಉಪನ್ಯಾಸ ನೀಡಿ, ಪ್ರತಿಯೊಬ್ಬ ವ್ಯಕ್ತಿಯು ಬಡ ಜನರಿಗೆ ಮಾಡುವ ಸೇವೆಯೇ ದೇವರಿಗೆ ಕಟ್ಟುವ ತೆರಿಗೆ. ಜನಸೇವೆಯು ಉಪಕಾರವಾಗುವುದಿಲ್ಲ ಅದನ್ನು ದೇವರಿಗೆ ಕಟ್ಟುವ ತೆರಿಗೆ ಎಂದು ಪರಿಗಣಿಸಬೇಕು ಇದು ಮಧ್ವಾಚಾರ್ಯರು ಕೊಟ್ಟಿರುವ ಸಂದೇಶ ಎಂದರು. ಇದೆ ಸಂದರ್ಭದಲ್ಲಿ ಶ್ರೀ ಮಧ್ಚಾಚಾರ್ಯ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಯ ನುಡಿನಮನ ಸಲ್ಲಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ…
ಉಡುಪಿ: ಕೃಷ್ಣ ಮಠದಲ್ಲಿ ವಿಜಯದಶಮಿ ಸಂಭ್ರಮ: ತೆನೆಪೂಜೆ ಚಿನ್ನದ ಪಲ್ಲಕ್ಕಿಯಲ್ಲಿ ಭತ್ತದ ತೆನೆಯ ಮೆರವಣಿಗೆ; ಕೃಷ್ಣನಿಗೆ ಸಮರ್ಪಣೆ
ಉಡುಪಿ: ವಿಜಯದಶಮಿ ಪರ್ವಕಾಲದ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೃಷಿ ಪರಂಪರೆ ಹಾಗೂ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಭತ್ತದ ತೆನೆಯನ್ನು ಪೂಜಿಸಿ ಶ್ರೀಕೃಷ್ಣನಿಗೆ ಸಮರ್ಪಿಸುವ ಮೂಲಕ ಸಂಪ್ರದಾಯವನ್ನು ಆಚರಿಸಲಾಯಿತು. ಪರಂಪರೆಯಂತೆ ಭತ್ತದ ತೆನೆಯನ್ನು ಸೋದೆ ಮಠದ ಮುಂಭಾಗದಲ್ಲಿ ವಿಧಿವಿಧಾನಗಳೊಂದಿಗೆ ಪೂಜಿಸಲಾಯಿತು. ಬಳಿಕ ತೆನೆಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಇರಿಸಿ, ಮಂಗಳವಾದ್ಯಗಳ ನಾದದೊಂದಿಗೆ ರಥಬೀದಿಯಲ್ಲಿ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಕೃಷ್ಣ ಮಠಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಠದ ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳು ವಿಶೇಷವಾಗಿ ಗಮನ ಸೆಳೆದವು. ವರ್ಷಕ್ಕೊಮ್ಮೆ ಮಾತ್ರ ತೆರೆಯಲಾಗುವ ಶ್ರೀಕೃಷ್ಣ ಗರ್ಭಗುಡಿಯ ಪೂರ್ವದ ಬಾಗಿಲನ್ನು ತೆರೆದು, ಭತ್ತದ ತೆನೆಯನ್ನು ಶ್ರೀಕೃಷ್ಣನಿಗೆ ಸಮರ್ಪಿಸಿ ಪೂಜೆ ಸಲ್ಲಿಸಲಾಯಿತು. ಕೃಷಿ ಸಮೃದ್ಧಿ, ಧಾನ್ಯವೃದ್ಧಿ ಹಾಗೂ ಲೋಕಕಲ್ಯಾಣದ ಸಂಕೇತವಾಗಿ ಆಚರಿಸಲಾಗುವ ಈ ಧಾರ್ಮಿಕ ವಿಧಿಯಲ್ಲಿ ಭಕ್ತಿಭಾವಕ್ಕೆ ವಿಶೇಷ ಮಹತ್ವವಿದೆ. ಪೂಜೆಯ ಬಳಿಕ ಶ್ರೀಕೃಷ್ಣ ಮಠದ ಮುಂಭಾಗದಲ್ಲಿರುವ ಲಕ್ಷ್ಮೀ ಮಂಟಪದಲ್ಲಿ ಅಷ್ಟಮಠಗಳ ಸ್ವಾಮೀಜಿಗಳ ಮಠಗಳಿಗೆ ಹಾಗೂ ಇತರ ಉಪಮಠಗಳಿಗೆ ಸಂಪ್ರದಾಯದಂತೆ ತೆನೆಯನ್ನು ವಿತರಿಸಲಾಯಿತು.…
ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಅಕ್ರಮವೆಂದು ಆರೋಪಿಸಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 23ರಂದು ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು, ನಾಗರಿಕ ವೇದಿಕೆಗಳು ಹಾಗೂ ರಾಜಕೀಯ ಪಕ್ಷಗಳು ಒಗ್ಗೂಡಿ ‘ಊರೂರು ಜಂತರ್ ಮಂತರ್’ ಘೋಷವಾಕ್ಯದಡಿ ಪ್ರತಿಭಟನೆಗೆ ಕರೆ ನೀಡಿವೆ ಎಂದು ಚಿಂತಕ ಪ್ರೊ. ಫಣಿರಾಜ್ ತಿಳಿಸಿದರು. ಉಡುಪಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ವಿರುದ್ಧವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ಮೂಲಕ ಕೋಟ್ಯಂತರ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 2023ರಲ್ಲಿ ಜಾರಿಗೆ ತಂದಿರುವ ಚುನಾವಣಾ ಆಯುಕ್ತರ ನೇಮಕಾತಿ ನಿಯಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ಅವುಗಳನ್ನು ರದ್ದುಗೊಳಿಸಿ, ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ನಿಷ್ಪಕ್ಷಪಾತವನ್ನು ಖಾತರಿಪಡಿಸುವ ಹೊಸ ನಿಯಮ…
ಬೆಂಗಳೂರು,ದಸರಾ ರಜೆಗಳ ಸಂಭ್ರಮದ ನಡುವೆ ಸರ್ಕಾರಿ ನೌಕರರಿಗೆ ಮತ್ತೊಂದು ರಜೆ ಭಾಗ್ಯ ಒಲಿದಿದೆ. ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಅರ್ಹ ಮತದಾರ ನೌಕರರಿಗೆ ಸರ್ಕಾರ ವಿಶೇಷ ರಜೆ ಘೋಷಿಸಿದೆ. ಅಕ್ಟೋಬರ್ 23ರ ಶುಕ್ರವಾರದ ವಿಶೇಷ ರಜೆಯೊಂದಿಗೆ ಶನಿವಾರ, ಭಾನುವಾರ ಹಾಗೂ ಅಕ್ಟೋಬರ್ 26ರ ಸೋಮವಾರದ ವಾಲ್ಮೀಕಿ ಜಯಂತಿ ರಜೆ ಸೇರಿ ಸತತ ನಾಲ್ಕು ದಿನ ರಜೆ ಸಿಗಲಿದೆ. ಇದರಿಂದ ಅರ್ಹ ಸರ್ಕಾರಿ ನೌಕರರಿಗೆ ವಾರಾಂತ್ಯದಲ್ಲಿ ವಿಶ್ರಾಂತಿ ಪಡೆಯಲು ಅವಕಾಶ ದೊರೆಯಲಿದೆ. ಆದರೆ, ಅಕ್ಟೋಬರ್ 23ರ ವಿಶೇಷ ರಜೆ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುವ ಸಂಬಂಧಪಟ್ಟ ನೌಕರರಿಗೆ ಮಾತ್ರ ಅನ್ವಯವಾಗಲಿದೆ.
ಮಂಗಳೂರು: ನಗರದ ಪಿವಿಎಸ್ ಸೆಂಟಿನರಿ ಕಟ್ಟಡದ ಸಮೀಪದ ಕೊಡ್ಯಾಲಬೈಲ್‌ನ ಶ್ರೀ ಲಕ್ಷ್ಮೀನಾರಾಯಣೀ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಭಕ್ತಿಭಾವದಿಂದ ನಡೆಯಿತು. ನವರಾತ್ರಿ ಅಂಗವಾಗಿ ದೇವಸ್ಥಾನವನ್ನು ಬಣ್ಣಬಣ್ಣದ ಹೂಮಾಲೆಗಳಿಂದ ಅಲಂಕರಿಸಲಾಗಿತ್ತು. ದೇವರ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಪ್ರಧಾನ ಅರ್ಚಕರು ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು. ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ನವರಾತ್ರಿ ಹಬ್ಬವು ದುರ್ಗಾದೇವಿಯ ಆರಾಧನೆ, ಶಕ್ತಿ ಉಪಾಸನೆ ಹಾಗೂ ಧಾರ್ಮಿಕ ಸಂಪ್ರದಾಯಗಳ ಮಹತ್ವವನ್ನು ಸಾರುತ್ತದೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಭಕ್ತರಲ್ಲಿ ಭಕ್ತಿ, ಶ್ರದ್ಧೆ ಮತ್ತು ಪರಸ್ಪರ ಸೌಹಾರ್ದತೆಯನ್ನು ವೃದ್ಧಿಸಲು ಸಹಕಾರಿಯಾಗುತ್ತವೆ ಎಂದು ಪ್ರಧಾನ ಅರ್ಚಕರಾದ ಅಶೋಕ್ ಭಟ್ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರತಿ ದಿನ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಪ್ರಸಾದ ಭೋಜನ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು. ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಅನ್ನದಾನ ಸೇವೆಯೂ ಕಾರ್ಯಕ್ರಮದ ವಿಶೇಷತೆಯಾಗಿತ್ತು. ದೇವಸ್ಥಾನದ ಸನ್ನಿಧಿಯಲ್ಲಿ ನಡೆದ ಪೂಜೆ…
ಮಂಗಳೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 21ರಂದು ನಡೆಯಲಿರುವ ಆಕರ್ಷಕ ಶೋಭಾಯಾತ್ರೆಗೆ ಕುಡ್ಲ ಸಜ್ಜಾಗಿದೆ. ವರ್ಣರಂಜಿತ ಸ್ತಬ್ಧಚಿತ್ರಗಳು, ಆಕರ್ಷಕ ಹುಲಿವೇಷ ಕುಣಿತ, ರೋಮಾಂಚನಕಾರಿ ಚೆಂಡೆ ವಾದನ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನಗಳು ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸಲಿವೆ. ಕರಾವಳಿಯ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಕಲಾ ವೈಭವವನ್ನು ಪ್ರತಿಬಿಂಬಿಸುವ ಮಂಗಳೂರು ದಸರಾ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ನಗರದೆಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದ್ದು, ಕುಡ್ಲ ಮತ್ತೊಮ್ಮೆ ದಸರಾ ಸಂಭ್ರಮದಲ್ಲಿ ಮಿಂದೇಳಲು ಸಿದ್ಧವಾಗಿದೆ.
ಮಂಗಳೂರು ಹೊರವಲಯದ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಉದ್ದೇಶಪೂರ್ವಕವಾಗಿ ಪಿಕಪ್ ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೃತರನ್ನು ಮುಹಮ್ಮದ್ ಝುನೈದ್ ಮತ್ತು ಮೊಹಮ್ಮದ್ ಅಫ್ರಾಝ್ ಎಂದು ಗುರುತಿಸಲಾಗಿದೆ. ಘಟನೆಗೂ ಮುನ್ನ ರಂತಡ್ಕ ಕ್ರಾಸ್‌ನಲ್ಲಿ ಇಬ್ಬರು ಯುವಕರು ಹಾಗೂ ಪಿಕಪ್ ಚಾಲಕ ಹಫೀಜ್ ಅಲಿಯಾಸ್ ಅಪ್ಪಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಬಳಿಕ ಯುವಕರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಚಾಲಕ ಅವರನ್ನು ಹಿಂಬಾಲಿಸಿ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಕೊಣಾಜೆ ಪೊಲೀಸರು ಆರೋಪಿ ಹಫೀಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ. 5ರೊಳಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ಜಿಲ್ಲಾಸ್ಪತ್ರೆ ಆರಂಭಿಸಿ ಹಳೆಯ ಆಸ್ಪತ್ರೆಯ ಪರಿಕರಗಳ ಅಳವಡಿಕೆಗೆ ಕರವೇ ಆಕ್ಷೇಪ; ಪ್ರವೀಣ್ ಶೆಟ್ಟಿ ಎಚ್ಚರಿಕೆ
ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೊಂದಿಗೆ ಆರಂಭಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭಿಸಬೇಕು. ಜಿಲ್ಲಾಡಳಿತ ನೀಡಿರುವ ಭರವಸೆಯಂತೆ ನವೆಂಬರ್ 5ರೊಳಗೆ ಆಸ್ಪತ್ರೆ ಕಾರ್ಯಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು. ಈ ಕುರಿತು ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯನ್ನು ಆರಂಭಿಸುವಂತೆ ಆಗ್ರಹಿಸಿ ಕರವೇ ನಡೆಸಿದ ಹೋರಾಟದ ಫಲವಾಗಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಆರಂಭಿಸುವ ಭರವಸೆ ನೀಡಿದೆ. ಆದರೆ, ತರಾತುರಿಯಲ್ಲಿ ಆಸ್ಪತ್ರೆ ಆರಂಭಿಸುವ ಉದ್ದೇಶದಿಂದ ಹಳೆಯ ಜಿಲ್ಲಾಸ್ಪತ್ರೆಯ ಪರಿಕರಗಳನ್ನು ನೂತನ ಕಟ್ಟಡಕ್ಕೆ ತಂದು ಅಳವಡಿಸುವ ಕೆಲಸ ನಡೆಯುತ್ತಿದೆ. ಇದು ಸಂಘಟನೆಯ ಬೇಡಿಕೆಗೆ ವಿರುದ್ಧವಾಗಿದ್ದು, ಈ ಕ್ರಮವನ್ನು ಖಂಡಿಸುತ್ತೇವೆ ಎಂದರು. ನೂತನ ಜಿಲ್ಲಾಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಆರಂಭಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ. ಕೇವಲ ಕಟ್ಟಡವನ್ನು ಸಿದ್ಧಪಡಿಸಿ, ಹಳೆಯ ಪರಿಕರಗಳನ್ನು ಸ್ಥಳಾಂತರಿಸುವ ಮೂಲಕ ಆಸ್ಪತ್ರೆ ಆರಂಭಿಸಿದರೆ ರೋಗಿಗಳಿಗೆ…
ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ಆರೋಪಿ ಬಂಧನ ₹85 ಸಾವಿರ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಸಹಿತ ಸೊತ್ತು ವಶ
ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ₹85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅ.17ರಂದು ರಾತ್ರಿ 10.30ರ ಸುಮಾರಿಗೆ ಭುಜಂಗ ಪಾರ್ಕ್ ಸಮೀಪ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉದ್ಯಾವರದ ಅಂಕುದ್ರು ನಿವಾಸಿಯಾದ ಈತ ಸ್ಕೂಟರ್‌ನ ಡಿಕ್ಕಿಯಲ್ಲಿ ಮಾದಕ ವಸ್ತು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ 17.66 ಗ್ರಾಂ ತೂಕದ ಎಂಡಿಎಂಎ ಎಂದು ಉಲ್ಲೇಖಿಸಲಾದ ಆಂಫೆಟಮೈನ್/ಮೆಥಾಂಫೆಟಮೈನ್ ಹೊಂದಿರುವ ಒಂಬತ್ತು ಜಿಪ್ ಕವರ್‌ಗಳು, 2.18 ಗ್ರಾಂ ತೂಕದ ಬಣ್ಣದ ಮಾತ್ರೆ ಹಾಗೂ ಪುಡಿ, ತೂಕದ ಯಂತ್ರ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್ ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇವರ ಸಹಕಾರದೊಂದಿಗೆ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿ ಅಕ್ಟೋಬರ್ 21 ರಂದು ನಗರದ ತುಳುಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಟಾನದ ನಿರ್ದೇಶಕ ಡಾ.ಬಿ ಗೋಪಾಲಾಚಾರ್ ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
