Author: navabharatha

ಮಂಗಳೂರು:ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಪಿಲಿಕುಳದಲ್ಲಿರುವ ವಿವಿಧ ಪ್ರವಾಸೋದ್ಯಮ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಪರಿಚಯಿಸುವ ಹಾಗೂ ಪರಿಸರ, ಪ್ರಕೃತಿ ಮತ್ತು ಜಲಚರ ಸಂಪನ್ಮೂಲ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪಿಲಿಕುಳದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 9.30 ರಿಂದ ಪಿಲಿಕುಳದ ಲೇಕ್ ಗಾರ್ಡನ್‍ನ ಕೆರೆಯಲ್ಲಿ ಇರುವ ಮೀನುಗಳನ್ನು ಹಿಡಿಯುವ “ಮತ್ಸ್ಯ ಮೇಳ”ವು ಮೀನು ಮರಿಗಳನ್ನು ಕೆರೆಗೆ ಬಿಡುವ ಕಾರ್ಯಕ್ರಮ ಹಾಗೂ “ಮತ್ಸ್ಯ ಆಹಾರ ಮೇಳ”ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮತ್ಸ್ಯ ಮೇಳದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‍ನ ಮುಂಭಾಗದಲ್ಲಿ ಸಾರ್ವಜನಿಕರಿಗಾಗಿ ವಿಶೇಷ ಮೀನಿನ ಖಾದ್ಯಗಳ ಆಹಾರ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಮೇಳದಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಮಂಗಳೂರಿನ ಹೋಟೆಲ್‍ಗಳ ಆಸಕ್ತ ಉದ್ಯಮದಾರರು ತಮ್ಮ ಮಳಿಗೆಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ಅಕ್ಟೋಬರ್ 22 ರೊಳಗೆ ದೂರವಾಣಿ ಸಂಖ್ಯೆ 0824-2263565 ಅನ್ನು ಸಂಪರ್ಕಿಸುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ…

Read More

ಮಂಗಳೂರು :2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಮಂಗಳೂರು ಉತ್ತರ ಹಾಗೂ ಮೂಡಬಿದ್ರೆ ಶೈಕ್ಷಣಿಕ ವಲಯಗಳಲ್ಲಿ ಖಾಲಿ ಇರುವ ಒಟ್ಟು 2 ಹುದ್ದೆಗಳಿಗೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ((Academic Resource Person for Mental health)ಯನ್ನು ಸಮಾಲೋಚಕ(consultant) ಆಧಾರದ ಮೇರೆಗೆ ಫೆಬ್ರವರಿ-2027 ರವರೆಗೆ ನೇಮಕ ಮಾಡಿಕೊಳ್ಳಲು ಮನೋ ವಿಜ್ಞಾನ/ ಕ್ಲಿನಿಕಲ್ ಮನೋವಿಜ್ಞಾನ/ ಕೌನ್ಸಿಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ/ಎಂ.ಎಸ್ಸಿ. ಪದವಿಯನ್ನು ಹೊಂದಿರುವ (ವಯೋಮಿತಿ 26 ರಿಂದ 50 ವರ್ಷ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 28 ರೊಳಗೆ ಕಛೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದ.ಕ ಜಿಲ್ಲಾ ಪಂಚಾಯತ್ ಕಟ್ಟಡದ 2ನೇ ಮಹಡಿಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಅಕ್ಟೋಬರ್ 18ರ ಸಂಜೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ಬೆನ್ನಲ್ಲೇ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿರುವ ಆಡಿಯೋ ಕ್ಲಿಪ್ ಕೂಡ ಸುದ್ದಿಯಾಗಿದೆ. ಟೈಗರ್ ಶ್ರಾಫ್‌ಗೆ ಅಪಾಯವಿಲ್ಲ: ವರದಿಗಳ ಪ್ರಕಾರ, ಅವರ ಕಾರಿನ ಮೇಲೆ ಗುಂಡು ಹಾರಿಸಲಾಗಿದ್ದು, ಟೈಗರ್ ಗಾಯವಿಲ್ಲದೆ ಪಾರಾಗಿದ್ದಾರೆ. ಅವರ ಚಾಲಕ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ.  ಪೊಲೀಸ್ ತನಿಖೆ: ಗುಂಡಿನ ದಾಳಿ ಪ್ರಕರಣದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

Read More

ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಜೀವಂತ ಫಲಾನುಭವಿಗಳನ್ನು ತಪ್ಪಾಗಿ ಮೃತರೆಂದು ದಾಖಲಿಸಿರುವ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು. ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣದ ವಸೂಲಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಈ ನಿಟ್ಟಿನಲ್ಲಿ ಶೇಕಡಾ 100ರಷ್ಟು ಗುರಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಖಾತೆಗಳಿಗೆ ಮುಂದಿನ ದಿನಗಳಲ್ಲಿ ಹಣ ಜಮೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯದಿಂದ ಸಭೆ ನಡೆಸಿ, ಸೂಕ್ತ ನಿರ್ಣಯಗಳನ್ನು ಕೈಗೊಳ್ಳಬೇಕು. ವಸೂಲಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ,…

Read More

ಮಂಗಳೂರು: ಈ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1 ರಂದು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ನೆಹರು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನ ನಡೆಯಲಿವೆ ಎಂದು ಅವರು ಹೇಳಿದರು. ರಾಜ್ಯೋತ್ಸವದಲ್ಲಿ ನಾಡು ನುಡಿಯ ಶ್ರೀಮಂತಿಕೆ ಮತ್ತು ವೈಭವವನ್ನು ಪ್ರದರ್ಶಿಸುವ ಕಾರ್ಯಕ್ರಮಗಳನ್ನು ನಡೆಸಬೇಕು. ಅಂದು ಬೆಳಿಗ್ಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‍ನಿಂದ ನೆಹರೂ ಮೈದಾನದವರೆಗೆ ಸಾಂಸ್ಕøತಕ ಮೆರವಣಿಗೆ ನಡೆಯಲಿದ್ದು, ನಾಡಿನ ಸಾಧನೆ, ಕಲೆ, ವೀರ ಪುರುಷರು, ಹೋರಾಟಗಾರರ ಸ್ಥಬ್ಧಚಿತ್ರಗಳನ್ನು ಮತ್ತು ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು. ಎಲ್ಲ ಇಲಾಖೆಗಳು ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಕ್ರ್ರಿಯವಾಗಿ ಪಾಲ್ಗೊಂಡು…

Read More

ಮಂಗಳೂರು ; ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ, ಅಶಕ್ತರಿಗೆ ನೆರವು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಕೊಡುಗೆ ಕಾರ್ಯಕ್ರಮ ಗುರುವಾರ ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಪರ್ಯಾಯ ಅಧೋಕ್ಷಜ ಮಠದ ಪೇಜಾವರ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ಆಶೀರ್ವಚನ ನೀಡಿದ ಶ್ರೀಗಳು, ‘ವಿಜಯದಶಮಿ ಹಾಗೂ ನವರಾತ್ರಿ ಪರ್ವಕಾಲದಲ್ಲಿ ನಾವೆಲ್ಲರೂ ಇದ್ದೇವೆ. ಪಂಚ ಮಹಾಪರ್ವಗಳಲ್ಲಿ ನವರಾತ್ರಿ ಉತ್ಸವ ಅತ್ಯಂತ ಮಹತ್ವದ್ದಾಗಿದೆ. ಉತ್ಸವ ಎಂದರೆ ಹರ್ಷ ಮತ್ತು ಉಲ್ಲಾಸವನ್ನು ತುಂಬುವ ಸಂದರ್ಭ. ನಮ್ಮ ನಾಡಿನ ಜನರಿಗೆ ಶಕ್ತಿ ಹಾಗೂ ಪ್ರೇರಣೆ ನೀಡುವ ಇಂತಹ ಉತ್ಸವಗಳು ಸಮಾಜದ ಒಗ್ಗಟ್ಟಿಗೆ ಸಹಕಾರಿಯಾಗಿವೆ. ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಂತಹ ಮಹನೀಯರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಆರೋಗ್ಯ, ಆಯಸ್ಸು ಮತ್ತು ಉತ್ತಮ ಭವಿಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರು…

Read More

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ನ ಟಯರ್ ಕಳಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೃಂಗೇರಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಶಿವಮೊಗ್ಗ ಡಿಪೋಗೆ ಸೇರಿದ KSRTC ಬಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಬಸ್ ಚಲಿಸುತ್ತಿದ್ದ ಸಂದರ್ಭದಲ್ಲೇ ಟಯರ್ ಕಳಚಿ ರಸ್ತೆಗೆ ಬಿದ್ದಿದ್ದು, ಇದರಿಂದ ಪ್ರಯಾಣಿಕರು ಆತಂಕಕ್ಕೊಳಗಾದರು. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಆದರೆ, ಕಳಚಿ ಬಂದ ಟಯರ್ ಮತ್ತೊಂದು ವಾಹನಕ್ಕೆ ಬಡಿದು ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಸಾರಿಗೆ ಬಸ್‌ಗಳ ನಿರ್ವಹಣೆ ಹಾಗೂ ಸುರಕ್ಷತೆಯ ಕುರಿತು ಈ ಘಟನೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಸ್‌ಗಳ ನಿಯಮಿತ ತಾಂತ್ರಿಕ ತಪಾಸಣೆ ಮತ್ತು ಸೂಕ್ತ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

Read More

ಮಂಗಳೂರು; ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ಸುರತ್ಕಲ್, ಮಂಗಳೂರು ಹಾಗೂ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ), ಬೆಂಗಳೂರು ಸಂಯುಕ್ತವಾಗಿ ಅಕ್ಟೋಬರ್ 14, 2026ರಂದು ಎನ್‌ಐಟಿಕೆಯಲ್ಲಿ “ಬ್ಲೂ ಕಾರ್ಬನ್ ಪರಿಸರ ವ್ಯವಸ್ಥೆಗಳು ಮತ್ತು ಮ್ಯಾಂಗ್ರೋವ್ ಯೋಜನೆಗಳು” ಕುರಿತ ಉನ್ನತ ಮಟ್ಟದ ಹಿತಾಸಕ್ತಿದಾರರ ಸಭೆಯನ್ನು ಆಯೋಜಿಸಿತ್ತು. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 80 ನೀತಿ ನಿರೂಪಕರು, ವಿಜ್ಞಾನಿಗಳು, ಆಡಳಿತಾಧಿಕಾರಿಗಳು, ಶಿಕ್ಷಣ ತಜ್ಞರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು. ಸಭೆಯನ್ನು ಕರ್ನಾಟಕ ನೆಟ್ ಜೀರೋ ಟಾಸ್ಕ್ ಫೋರ್ಸ್‌ನ ಉಪಾಧ್ಯಕ್ಷರು, ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರ ಹವಾಮಾನ ಬದಲಾವಣೆ ಸಲಹೆಗಾರರು ಹಾಗೂ ಕರ್ನಾಟಕದ ಹವಾಮಾನ ರಾಯಭಾರಿಯಾಗಿರುವ ಶ್ರೀ ಉಪೇಂದ್ರ ತ್ರಿಪಾಠಿ, ಐಎಎಸ್ (ನಿ.), ಕರ್ನಾಟಕ ಸರ್ಕಾರದ ಪರಿಸರ ಮತ್ತು ಪರಿಸರಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಇಎಂಪಿಆರ್‌ಐ ಮಹಾನಿರ್ದೇಶಕರಾದ ಶ್ರೀ ಶ್ರೀನಿವಾಸಲು, ಐಎಫ್‌ಎಸ್, ಕರ್ನಾಟಕ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಪಡೆ ಅಧಿಕಾರಿ ಡಾ. ಮೀನಾಕ್ಷಿ…

Read More

ಬೆಂಗಳೂರು: ಗೃಹ ಬಳಕೆಗಾಗಿ ಜಲಮಂಡಳಿ ಪೂರೈಸುವ ನೀರಿನ ಶುಲ್ಕದ ಮೇಲೆ ಫ್ಲ್ಯಾಟ್‌ ಖರೀದಿದಾರರಿಂದ ಜಿಎಸ್‌ಟಿ ವಸೂಲಿ ಮಾಡುವಂತಿಲ್ಲ ಎಂದು ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಮಹತ್ವದ ಆದೇಶ ನೀಡಿದೆ. ಅಲ್ಲದೆ, ಸಮರ್ಪಕ ದಾಖಲೆಗಳಿಲ್ಲದೆ 600ಕ್ಕೂ ಹೆಚ್ಚು ದಿನಗಳ ವಿಳಂಬ ಪಾವತಿ ಬಡ್ಡಿ ವಿಧಿಸಿರುವುದನ್ನೂ ಪ್ರಾಧಿಕಾರ ಪ್ರಶ್ನಿಸಿದ್ದು, ಹೆಚ್ಚುವರಿ ಶುಲ್ಕಗಳನ್ನು ಪರಿಶೀಲಿಸಿ ಲೆಕ್ಕಪತ್ರದಲ್ಲಿ ತಿದ್ದುಪಡಿ ಮಾಡುವಂತೆ ಬಿಲ್ಡರ್‌ಗೆ ನಿರ್ದೇಶಿಸಿದೆ. ಕೆಂಗೇರಿಯ ‘ಕಾಸಾ ಗ್ರ್ಯಾಂಡ್‌ ಅಕ್ವೀನ್‌’ ವಸತಿ ಯೋಜನೆಯ ಫ್ಲ್ಯಾಟ್‌ ಖರೀದಿದಾರರಾದ ಸ್ನೇಹಾ ವೆಂಕಟೇಶ್‌ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಕೆ-ರೇರಾ ಅಧ್ಯಕ್ಷ ರಾಕೇಶ್‌ ಸಿಂಗ್‌ ಅವರಿದ್ದ ಪೀಠ ಈ ಆದೇಶ ನೀಡಿದೆ. ಕಾಸಾ ಗ್ರ್ಯಾಂಡ್‌ ಗಾರ್ಡನ್‌ ಸಿಟಿ ಬಿಲ್ಡರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ಈ ನಿರ್ದೇಶನ ನೀಡಲಾಗಿದೆ. ಗೃಹ ಬಳಕೆಯ ನೀರಿಗೆ ಜಿಎಸ್‌ಟಿ ಅನ್ವಯಿಸುವುದಿಲ್ಲ ಸಾರ್ವಜನಿಕ ಪ್ರಾಧಿಕಾರವು ಗೃಹ ಬಳಕೆಗಾಗಿ ಪೂರೈಸುವ ನೀರಿಗೆ ಜಿಎಸ್‌ಟಿ ವಿಧಿಸುವುದಕ್ಕೆ ಅವಕಾಶವಿಲ್ಲ ಎಂಬ ಅಂಶವನ್ನು ಕೆ-ರೇರಾ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಾಣಿಜ್ಯ ಉದ್ದೇಶದ ನೀರು…

Read More

ಮಂಗಳೂರು: ಕಾಡು, ನದಿ, ಹಸಿರು, ಜಲಮೂಲಗಳು ಹಾಗೂ ಭೂಮಿಯ ಫಲವತ್ತತೆ ಇವು ಪ್ರಕೃತಿಯ ಅಮೂಲ್ಯ ಸಂಪತ್ತು. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಯೋಜನೆಗಳು, ಪರಿಸರ ನಾಶ ಮತ್ತು ದೂರದೃಷ್ಟಿಯಿಲ್ಲದ ಆಡಳಿತಾತ್ಮಕ ನಿರ್ಧಾರಗಳು ಪ್ರಕೃತಿಯ ಸಮತೋಲನವನ್ನು ಹದಗೆಡಿಸುತ್ತಿವೆ. ಇದರ ಪರಿಣಾಮವಾಗಿ ಮಳೆಯ ಅನಿಶ್ಚಿತತೆ, ಅಂತರ್ಜಲ ಮಟ್ಟ ಕುಸಿತ, ನೀರಿನ ಕೊರತೆ ಹಾಗೂ ಬರಗಾಲದಂತಹ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ. ಒಂದು ಕಾಲದಲ್ಲಿ ಹಸಿರಿನಿಂದ ಕಂಗೊಳಿಸುತ್ತಿದ್ದ ಪ್ರದೇಶಗಳಲ್ಲಿಯೂ ಇಂದು ನೀರಿಗಾಗಿ ಹಾಹಾಕಾರ ಉಂಟಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಳೆಗಾಲದಲ್ಲಿ ಸುರಿಯುವ ನೀರನ್ನು ಸಮರ್ಪಕವಾಗಿ ಸಂಗ್ರಹಿಸದೆ, ಜಲಮೂಲಗಳನ್ನು ಸಂರಕ್ಷಿಸದೆ ಹಾಗೂ ಪರಿಸರದ ಸೂಕ್ಷ್ಮತೆಯನ್ನು ಪರಿಗಣಿಸದೆ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಭವಿಷ್ಯದ ಜಲಭದ್ರತೆಗೆ ಅಪಾಯವನ್ನು ತಂದೊಡ್ಡುತ್ತಿವೆ. ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಗೆ ಕೊಡಲಿ ಪೆಟ್ಟು ಅಭಿವೃದ್ಧಿ ಎಂಬುದು ಜನರ ಬದುಕನ್ನು ಸುಧಾರಿಸುವ ಸಾಧನವಾಗಬೇಕೇ ಹೊರತು, ಜನಜೀವನಕ್ಕೆ ಆಧಾರವಾಗಿರುವ ಪ್ರಕೃತಿಯನ್ನೇ ನಾಶಪಡಿಸುವ ಪ್ರಕ್ರಿಯೆಯಾಗಬಾರದು. ರಸ್ತೆ, ಕಟ್ಟಡ, ಕೈಗಾರಿಕೆ ಹಾಗೂ ಇತರ ಮೂಲಸೌಕರ್ಯ ಯೋಜನೆಗಳನ್ನು ರೂಪಿಸುವಾಗ ಪರಿಸರದ ಮೇಲೆ ಉಂಟಾಗುವ ಪರಿಣಾಮಗಳನ್ನು ವೈಜ್ಞಾನಿಕವಾಗಿ…

Read More