Author: navabharatha

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಬಿಡುಗಡೆಯ ಆರಂಭದಲ್ಲಿ ಸಾಧಾರಣ ಪ್ರತಿಕ್ರಿಯೆ ಪಡೆದಿದ್ದ ಚಿತ್ರವು ಎರಡನೇ ವಾರದಲ್ಲಿ ಗಳಿಕೆಯ ವೇಗ ಹೆಚ್ಚಿಸಿಕೊಂಡಿದ್ದು, ಕನ್ನಡ ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನ್ಯೂಸ್18 ಕನ್ನಡ ವರದಿಯ ಪ್ರಕಾರ, ಸೆಪ್ಟೆಂಬರ್ 25ರಂದು ಬಿಡುಗಡೆಯಾದ ಈ ಸಿನಿಮಾ ಕರ್ನಾಟಕದಲ್ಲಿ ಎರಡು ವಾರಗಳಲ್ಲಿ ₹33.75 ಕೋಟಿ ಗ್ರಾಸ್ ಕಲೆಕ್ಷನ್ ಹಾಗೂ ₹28.97 ಕೋಟಿ ನೆಟ್ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಈ ಅವಧಿಯಲ್ಲಿ ಚಿತ್ರವು ಒಟ್ಟು 6,829 ಪ್ರದರ್ಶನಗಳನ್ನು ಕಂಡಿದೆ ಎಂಬ ಮಾಹಿತಿಯೂ ವರದಿಯಾಗಿದೆ. ಮೊದಲ ದಿನ ₹13 ಲಕ್ಷ ಗಳಿಕೆ! ಬಿಡುಗಡೆಯ ಮೊದಲ ದಿನ ಸುಮಾರು 60 ಪ್ರದರ್ಶನಗಳ ಮೂಲಕ ₹13 ಲಕ್ಷ ಗಳಿಸಿತ್ತು ಎನ್ನಲಾದ ಈ ಚಿತ್ರ, ಮೊದಲ ವಾರಾಂತ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯಲು ಆರಂಭಿಸಿತು. ಮೊದಲ ಏಳು ದಿನಗಳಲ್ಲಿ ₹5.32 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ₹2 ಕೋಟಿ ಬಜೆಟ್‌, ಭರ್ಜರಿ ಗಳಿಕೆ! ‘ಪ್ರೇಮದ ಊರಲಿ’…

Read More

ಕೊಡಗು: ದಕ್ಷಿಣ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ಅಕ್ರಮವಾಗಿ ವಲಸೆ ಬಂದಿದ್ದಾರೆಂದು ಶಂಕಿಸಲಾದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಟ್ಟಿಗೇರಿ ಗ್ರಾಮದ ತೋಟವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರಲ್ಲಿ ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನವೊಂದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಬಳಿಕ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರ ಗುರುತು, ಹಿನ್ನೆಲೆ ಹಾಗೂ ದಾಖಲೆಗಳ ಕುರಿತು ಪರಿಶೀಲನೆ ನಡೆಸಬೇಕಿದೆ. ಸಮಗ್ರ ತನಿಖೆಗೆ ಆಗ್ರಹ ನಾಲ್ವರು ವಲಸಿಗರ ಹಿನ್ನೆಲೆ, ಭಾರತಕ್ಕೆ ಬಂದಿರುವ ಮಾರ್ಗ ಹಾಗೂ ಅವರ ಬಳಿ ಇರುವ ದಾಖಲೆಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಈ ಕುರಿತು ಹಲವು ವರ್ಷಗಳಿಂದ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲಗಳನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಪ್ರಸ್ತಾವನೆ ಕುರಿತು ಸಾರ್ವಜನಿಕರು ತಮ್ಮ ಸಲಹೆ, ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 30 ದಿನಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಕೆಳಕಂಡ ವಿಳಾಸಗಳಿಗೆ ಸಲ್ಲಿಸಬಹುದು. 1. ಮುಖ್ಯಮಂತ್ರಿಗಳ ಸಚಿವಾಲಯ ಕೊಠಡಿ ಸಂಖ್ಯೆ 235, ಎರಡನೇ ಮಹಡಿ, ವಿಧಾನಸೌಧ, ಬೆಂಗಳೂರು. ಇ-ಮೇಲ್: cm.kar@nic.in 2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಕೊಠಡಿ ಸಂಖ್ಯೆ 711, ಏಳನೇ ಮಹಡಿ, ಬಹುಮಹಡಿ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು. ಇ-ಮೇಲ್: prs.revenue@gmail.com 3. ಜಿಲ್ಲಾಧಿಕಾರಿಗಳು,…

Read More

ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿರುವುದನ್ನು ಖಂಡಿಸಿ, ಮಂಗಳೂರಿನ ಬೆಂದೂರುವೆಲ್‌ನ ಸೇಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ದ್ವಾರದ ಎದುರು ಧರಣಿ ನಡೆಸಿ, ಪರೀಕ್ಷಾ ದಿನಾಂಕವನ್ನು ಬದಲಾಯಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ದಸರಾ ಹಬ್ಬದ ಸಂಭ್ರಮ ಮನೆಮಾಡಿದ್ದು, ಮೈಸೂರು ದಸರಾ ಹಾಗೂ ಮಂಗಳೂರು ದಸರಾ ಸೇರಿದಂತೆ ವಿವಿಧೆಡೆ ಹಬ್ಬದ ಆಚರಣೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಪರೀಕ್ಷೆಗಳನ್ನು ನಿಗದಿಪಡಿಸಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲ ವ್ಯಕ್ತಪಡಿಸಿದ್ದು, ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು ಆಗ್ರಹಿಸಿದೆ. ಪರೀಕ್ಷಾ ದಿನಾಂಕ ಬದಲಾಯಿಸಲು ವಿಎಚ್‌ಪಿ ಆಗ್ರಹ ಸೇಂಟ್ ಆಗ್ನೆಸ್ ಕಾಲೇಜಿನ ಆಡಳಿತ ಮಂಡಳಿ ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹೇಳಿದ್ದಾರೆ. ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ,…

Read More

ಮಂಗಳೂರು: ಕೊರಗ ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಿ, ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ಇಂದು ಅರೆಬೆತ್ತಲೆ ಮೆರವಣಿಗೆ ನಡೆಯಿತು. ಕರ್ನಾಟಕ ಆದಿವಾಸಿಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊರಗ ಸಮುದಾಯದ ಅನೇಕರು ಪಾಲ್ಗೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ವಾಮಂಜೂರಿನಿಂದ ಆರಂಭವಾದ ಪಾದಯಾತ್ರೆಯು ಪಂಪ್‌ವೆಲ್ ಮೂಲಕ ಪಡೀಲ್‌ವರೆಗೆ ಸಾಗಿತು. ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಿ, ಹಕ್ಕುಪತ್ರ ವಿತರಿಸುವ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 20ನೇ ತಿರುವೈಲು ವಾರ್ಡಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಆಶ್ರಯ ನಗರ, ಸದಾಶಿವನಗರ ಹಾಗೂ ಅಮೃತನಗರದ ಸುಮಾರು ಒಂದು ಕಿಲೋಮೀಟರ್ ಉದ್ದದ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಕಾಂಕ್ರಿಟೀಕರಣ ಕಾಮಗಾರಿಗೆ ₹3 ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. 2024-25ನೇ ಸಾಲಿನ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಇಂದು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ಅನುಕೂಲವಾಗಲಿದ್ದು, ಸುಗಮ ಹಾಗೂ ಸುರಕ್ಷಿತ ರಸ್ತೆ ಸಂಪರ್ಕಕ್ಕೆ ನೆರವಾಗುವ ನಿರೀಕ್ಷೆಯಿದೆ. ಬಹುಕಾಲದಿಂದ ರಸ್ತೆ ಅಭಿವೃದ್ಧಿಯನ್ನು ನಿರೀಕ್ಷಿಸುತ್ತಿದ್ದ ಪ್ರದೇಶದ ನಿವಾಸಿಗಳ ಬೇಡಿಕೆಗೆ ಈ ಯೋಜನೆಯ ಮೂಲಕ ಸ್ಪಂದಿಸಿದಂತಾಗಿದೆ.

Read More

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ, ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿ ಎಂಬಾತನನ್ನು ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕನಾಗಿರುವ ಸತೀಶ್ ಪಾತ್ರಿ ವಿರುದ್ಧ ಹಾಸನ ಮೂಲದ ಮಹಿಳೆಯೊಬ್ಬರು ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು, ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಕೊಪ್ಪ ಹಾಗೂ ಎನ್.ಆರ್.ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಬ್ಲ್ಯಾಕ್ ಮ್ಯಾಜಿಕ್ ನಿಷೇಧ ಕಾಯ್ದೆಯಡಿ ಕೂಡ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಸತೀಶ್ ಪಾತ್ರಿ ತಲೆಮರೆಸಿಕೊಂಡಿದ್ದ. ಪೊಲೀಸರ ಚಲನವಲನಗಳ ಬಗ್ಗೆ ಮಾಹಿತಿ ಪಡೆದು, ಪೊಲೀಸರು ತನ್ನನ್ನು ಬಂಧಿಸಲು ಬರುವ ಮುನ್ನವೇ…

Read More

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬಯಲುಸೀಮೆ ಭಾಗದಲ್ಲಿ ಚಿರತೆಗಳ ಸಂಚಾರ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ತಾಲ್ಲೂಕಿನ ಆಲಘಟ್ಟ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಯಿ ಬೇಟೆಯಾಡುವ ಉದ್ದೇಶದಿಂದ ಮನೆಯ ಸಮೀಪಕ್ಕೆ ಬಂದಿದ್ದ ಚಿರತೆ, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಈ ಭಾಗದಲ್ಲಿ ಸಂಚರಿಸುತ್ತಿದೆ ಎನ್ನಲಾಗಿದೆ. ಆಲಘಟ್ಟ ಮಾತ್ರವಲ್ಲದೆ ವಿ.ಯರದಕೆರೆ ಹಾಗೂ ಚಟ್ನಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಸಿಂಗಟಗೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯ ಸಂಚಾರ ಕಂಡುಬರುತ್ತಿದ್ದು, ಜನವಸತಿ ಪ್ರದೇಶಗಳ ಸಮೀಪವೇ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ರಾತ್ರಿ ಸಮಯದಲ್ಲಿ ಮನೆಗಳ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು, ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಜನವಸತಿ ಪ್ರದೇಶಗಳಿಂದ ದೂರವಿರುವ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಮಂಗಳೂರು ರಾಜ್ಯ ಸರಕಾರವು ಸರಕಾರಿ ಅಧಿಕಾರಿ ಮತ್ತು ನೌಕರರಿಗೆ ನಗದು ರಹಿತ ಚಿಕಿತ್ಸೆಗೆÉ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಜಾರಿಗೆ ತಂದಿದ್ದು, ಇದರಿಂದ ನೌಕರರ ಚಿಕಿತ್ಸೆ ಸುಲಲಿತವಾಗಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕೆ.ಎ.ಎಸ್.ಎಸ್ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಮಂಗಳೂರು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಕೆ.ಎ.ಎಸ್.ಎಸ್ ಯೋಜನೆಯಡಿ ನಗದು ರಹಿತವಾಗಿ ಚಿಕಿತ್ಸೆ ದೊರಕಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಉಪನಿರ್ದೇಶಕ ಡಾ. ಮಹೇಶ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 14 ಆಸ್ಪತ್ರೆಗಳು ಈ ಯೋಜನೆಯಡಿ ಸೇರ್ಪಡೆಯಾಗಿದೆ. ಇನ್ನಷ್ಟು ಆಸ್ಪತ್ರೆಗಳನ್ನು ಯೋಜನೆಯಡಿ ತರಲು ಪ್ರಯತ್ನಗಳಾಗುತ್ತಿವೆ. ಕೆ.ಎ.ಎಸ್.ಎಸ್ ಯೋಜನೆಯಲ್ಲಿ ಆಸ್ಪತ್ರೆಗಳಿಗೆ ಉತ್ತಮ ಪ್ಯಾಕೇಜ್ ದರವನ್ನು ನಿಗದಿಗೊಳಿಸಲಾಗಿದೆ. ಯೋಜನೆಯಡಿ ಆಸ್ಪತ್ರೆಗಳಿಗೆ…

Read More

ಮಂಗಳೂರು ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್ – ದಕ್ಷಿಣ ಕನ್ನಡ, ಗ್ರಾಮ ಪಂಚಾಯತ್ ಹಳೆಯಂಗಡಿ ಸಹಯೋಗದೊಂದಿಗೆ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ, ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್ ಯುವತಿ ಮತ್ತು ಮಹಿಳಾ ಮಂಡಲ, ಕಿಶೋರ-ಕಿಶೋರಿ ಸಂಘ ಹಾಗೂ ಅನೇಕ ವಿದ್ಯಾ ಸಂಸ್ಥೆಗಳ ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ “ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ” ಎಂಬ ಆಶಯದೊಂದಿಗೆ “ಸ್ವಚ್ಛತಾ ಹೀ ಸೇವಾ ಅಭಿಯಾನ”ವನ್ನು ಆಯೋಜಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮಕ್ಕೆ ಹಳೆಯಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೇಶ ಚೌಟ. ಕೆ., ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಚಾಲನೆ ನೀಡಿದರು. ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ದ್ವಾರದಿಂದ ಮುಂಡ ಬೀಚ್‍ವರೆಗೆ ಬೀಚ್ ಸ್ವಚ್ಛತಾ ಮಹಾ ಅಭಿಯಾನ ನಡೆಯಿತು. ಅಭಿಯಾನದ ಸಂದರ್ಭದಲ್ಲಿ ಬೀಚ್‍ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಹೆಕ್ಕಿ ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು. ಈ ಸ್ವಚ್ಛತಾ ಅಭಿಯಾನದಲ್ಲಿ…

Read More