Author: navabharatha

ಮಂಗಳೂರು ಅನಾಥಾಶ್ರಮದಲ್ಲಿದ್ದ ಗಣೇಶ್‌(16) ಎಂಬುವವರು ಅಕ್ಟೋಬರ್ 10 ರಂದು ಕಾಣೆಯಾಗಿದ್ದು, ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನು ಬೆಳಗಿನ ಜಾವ 3-30 ಗಂಟೆಯ ವೇಳೆಗೆ ಆಶ್ರಮದ ಬಿಲ್ಡಿಂಗ್ ಗೇಟನ್ನು ಕೀ ಸಹಾಯದಿಂದ ತೆಗೆದು ಹೊರ ಹೋಗಿರುವುದು ಕಂಡು ಬಂದಿರುತ್ತದೆ. ಕಾಣೆಯಾದವರ ಚಹರೆಃ- ಎತ್ತರ 5 ಅಡಿ 3 ಇಂಚು, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ ಪ್ಯಾಂಟ್ ಕಪ್ಪು ಬಣ್ಣದ ಶರ್ಟ್ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಬಜಪೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನೀಲೇಗೌಡನ ಕೊಪ್ಪಲು ಗ್ರಾಮದಲ್ಲಿ ಮಳೆಗಾಗಿ ರೈತರು ಕಪ್ಪೆಗಳ ಮದುವೆ ಮಾಡಿಸುವ ಮೂಲಕ ಮಳೆರಾಯನನ್ನು ಒಲಿಸಿಕೊಳ್ಳಲು ವಿಶಿಷ್ಟ ಪ್ರಯತ್ನ ನಡೆಸಿದ್ದಾರೆ. ಮಳೆ ಕೈಕೊಟ್ಟು ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮ್ಮ ಹಿಂದಿನ ಸಂಪ್ರದಾಯದಂತೆ ಜೋಡಿ ಕಪ್ಪೆಗಳಿಗೆ ಮದುವೆ ಮಾಡಿಸಿ, ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗ್ರಾಮದ ದೇವಸ್ಥಾನದಲ್ಲಿ ಕಪ್ಪೆಗಳ ಮದುವೆ ನೆರವೇರಿಸಿದ ಸ್ಥಳೀಯರು, ಬಳಿಕ ಜೋಡಿ ಕಪ್ಪೆಗಳನ್ನು ಮನೆ ಮನೆಗೆ ಕರೆದೊಯ್ದು ಪೂಜೆ ಸಲ್ಲಿಸಿದ್ದಾರೆ. ಪ್ರತಿ ಮನೆಯಲ್ಲೂ ಕಪ್ಪೆಗಳ ಮೇಲೆ ನೀರು ಹಾಕಿ ಮಳೆಗಾಗಿ ಪ್ರಾರ್ಥಿಸುವ ಮೂಲಕ ಮಳೆರಾಯನ ಕೃಪೆಗೆ ಪಾತ್ರರಾಗುವ ಆಶಯ ವ್ಯಕ್ತಪಡಿಸಿದ್ದಾರೆ. 20 ವರ್ಷಗಳ ಹಿಂದಿನ ನಂಬಿಕೆ! ಮಳೆ ಕೈಕೊಟ್ಟು ಬರ ಎದುರಾದಾಗ ಕಪ್ಪೆಗಳ ಮದುವೆ ಮಾಡಿಸುವುದು ಈ ಭಾಗದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ ಎನ್ನಲಾಗಿದೆ. ಸುಮಾರು 20 ವರ್ಷಗಳ ಹಿಂದೆ ಇದೇ ರೀತಿ ಬರದ ಪರಿಸ್ಥಿತಿ ಎದುರಾದಾಗ ಗ್ರಾಮಸ್ಥರು…

Read More

ಮಂಗಳೂರು: ಕಾವೂರು ಬಂಟರ ಭವನದ ಉದ್ಘಾಟನಾ ಸಮಾರಂಭವನ್ನು ಜನವರಿ 29, 30 ಮತ್ತು 31ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಕಾವೂರು–ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನಾ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವ ಕುರಿತು ಭವನದ ಸಂಕೀರ್ಣದಲ್ಲಿ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ಡಿ. ಸುಧಾಕರ ಶೆಟ್ಟಿ ಮಾತನಾಡಿ, ಸುಮಾರು ₹13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಕಾಮಗಾರಿ ಅಂತಿಮ ಹಂತ ತಲುಪಿದೆ. ಆದರೆ, ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಆರ್ಥಿಕ ಕೊರತೆ ಎದುರಾಗಿದ್ದು, ಈ ಕೊರತೆಯನ್ನು ನೀಗಿಸಲು ಸಮಾಜದ ಎಲ್ಲ ಬಂಟ ಬಾಂಧವರು ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದರು. ಕಟ್ಟಡ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ ಅವರು ಮೂರು ದಿನಗಳ ಉದ್ಘಾಟನಾ ಸಮಾರಂಭದಲ್ಲಿ ಆಯೋಜಿಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಸಭೆಗೆ ಮಾಹಿತಿ…

Read More

ಮಂಗಳೂರು: ಮಂಗಳೂರು ದಸರಾ ಸಂಭ್ರಮದ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿದ್ದ ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಎಬಿವಿಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆದುಕೊಂಡ ರೀತಿ ಖಂಡನೀಯವಾಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಪೊಲೀಸ್ ಇಲಾಖೆ ಅತಿರೇಕದ ವರ್ತನೆ ತೋರಿದೆ. ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂಬ ಆರೋಪಗಳಿದ್ದು, ಇದು ಸರಿಯಲ್ಲ ಎಂದು ಹೇಳಿದರು. ಮಂಗಳೂರು ದಸರಾ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಲು ಬಯಸಿದ್ದ ವಿದ್ಯಾರ್ಥಿಗಳಿಗೆ ಹಬ್ಬದ ಮರುದಿನವೇ ಪರೀಕ್ಷೆ ನಿಗದಿಪಡಿಸಿರುವುದು ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿಂದೆ ಡಿಸೆಂಬರ್ 25ರಂದು ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 140ಕ್ಕೂ ಹೆಚ್ಚು ಕಾಲೇಜುಗಳ ಡಿಸೆಂಬರ್ 26ರ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೇ ಮಾದರಿಯಲ್ಲಿ ಸ್ವಾಯತ್ತ ಕಾಲೇಜಿನ ಪರೀಕ್ಷೆಯನ್ನೂ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು…

Read More

ರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ ಕೇಸ್‌ನ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ಇಂದು ಮಂಗಳೂರಲ್ಲಿ ಸಭೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಎಸ್ಐಟಿ ಕಚೇರಿಯಲ್ಲಿ ಎಸ್ ಐಟಿ ಮುಖ್ಯಸ್ಥ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಎಸ್ ಐಟಿ ತಂಡ ಇನ್ನೆರಡು ದಿನದಲ್ಲಿ ಬೆಳ್ತಂಗಡಿಗೆ ಭೇಟಿ ನೀಡಲಿದೆ. 2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸೂಚಿಸಿದೆ. ಎಸ್ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.

Read More

ಮಂಗಳೂರು: ಅದಾನಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ಟ್ಯಾಕ್ಸಿ ವಾಹನಗಳಿಂದ ಅವೈಜ್ಞಾನಿಕವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದು ‘ಹಗಲು ದರೋಡೆ’ಗೆ ಸಮಾನವಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸಿ ಟ್ಯಾಕ್ಸಿಗಳು ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಗುಣಮಟ್ಟದ, ತ್ವರಿತ ಹಾಗೂ ಸುರಕ್ಷಿತ ಸಾರಿಗೆ ಸೇವೆ ಒದಗಿಸುತ್ತಿವೆ. ಸಂಚಾರ ಮತ್ತು ಪೊಲೀಸ್ ನಿಯಮಗಳನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಟ್ಯಾಕ್ಸಿ ಚಾಲಕರು, ಜಿಲ್ಲೆಯಲ್ಲೇ ಆ್ಯಗ್ರಿಗೇಟರ್ ಸೇವೆಗಳು ಲಭ್ಯವಿದ್ದರೂ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು. ಆದರೆ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗ್ರಾಹಕರನ್ನು ಕರೆತರುವಾಗ ಮತ್ತು ಬಿಡುವಾಗ ಪ್ರವಾಸಿ ವಾಹನಗಳು ಅನಗತ್ಯ ತೊಂದರೆಗಳನ್ನು ಎದುರಿಸುತ್ತಿವೆ. ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ಖಾಸಗಿ ಕಾರುಗಳು ಮತ್ತು ಪ್ರವಾಸಿ ವಾಹನಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಕಾವೂರು ಜಂಕ್ಷನ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರೂ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಂಡಿಲ್ಲ…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಆರನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯು ಅ.15 ರಂದು ಅಪರಾಹ್ನ 2.30ಕ್ಕೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ. ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ 14 ಭಾಷೆಯ ಕವಿಗಳು ಕವಿತೆ ವಾಚಿಸಲಿದ್ದಾರೆ. ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ,ಸಾಹಿತಿ ಡಾ.ವಾಸುದೇವ ಬೆಳ್ಳೆ ಅವರು ಕವಿಗೋಷ್ಠಿಯನ್ನು ಉದ್ಘಾಟಿಸುವರು. ಪೂವರಿ ತುಳು ಪತ್ರಿಕೆಯ ಸಂಪಾದಕ ವಿಜಯ ಕುಮಾರ್ ಭಂಡಾರಿ ಹೆಬ್ಬಾರಬೈಲು ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು. ಲೇಖಕಿ ಡಾ.ಝೀಟಾ ಲೋಬೋ, ಕವಿ ಯು.ಕೆ ಖಾಲಿದ್ ಉಳ್ಳಾಲ್ಕಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು . ಮಯೂರಿ ಫೌಂಡೇಶನ್ ಟ್ರಸ್ಟಿ ಪ್ರಬೋದ್ ಕುಡ್ವ ಮುಲ್ಕಿ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಬಹುಭಾಷಾ ಕವಿಗೋಷ್ಠಿಯಲ್ಲಿ ಶಾರದಾ ಶೆಟ್ಟಿ (ತುಳು), ವಿಜಯರಾಜ್ ಪುಣಿಂಚತ್ತಾಯ(ಶಿವಳ್ಳಿ…

Read More

ಮಂಗಳೂರು ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಾಕಿ ಇರುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಜಿಲ್ಲೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಯೋಜನೆಗಳಡಿ ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಜಲ್ ಗಾಂವ್ ಐಡಿ ಸ್ಥಿತಿಗತಿ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (ಒಗಿS) ಹಾಗೂ ಏಕಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ (SಗಿS) ಅನುಷ್ಠಾನ, ಹರ್ ಘರ್ ಜಲ್ ಪ್ರಗತಿ, ಟಾಸ್ಕ್ ಪೋರ್ಸ್ ಕಾರ್ಯಚಟುವಟಿಕೆಗಳ ಪ್ರಗತಿ ಹಾಗೂ ಡಬ್ಲ್ಯೂ.ಪಿ.ಪಿ ಪ್ರಗತಿ, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಗತಿ, ಹಾಗೂ ಇತರೆ ಯೋಜನೆಗಳ ಕುರಿತು ಪ್ರಗತಿಯನ್ನು ಪರಿಶೀಲಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ನಿಗದಿತ ಗುರಿಗಳನ್ನು ಸಾಧಿಸಲು…

Read More

ಮಂಗಳೂರು ಕರ್ನಾಟಕ ಖಾಸಗಿ ವೈದ್ಯಕೀಯ ಸ್ಫಾಪನೆ ಕಾಯಿದೆ (ಕೆ.ಪಿ.ಎಂ.ಇ.ಎ) ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕೆ.ಪಿ.ಎಂ.ಇ.ಎ ನವೀಕರಣ ಪರವಾನಿಗೆ ಪಡೆಯಲು ಅಗ್ನಿಶಾಮಕ ಇಲಾಖೆಯಿಂದ ಪಡೆದ ಪ್ರಮಾಣಪತ್ರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದ ಪ್ರಮಾಣಪತ್ರ ಸಲ್ಲಿಸದೇ ಕೆ.ಪಿ.ಎಂ.ಇ.ಎ ಪ್ರಮಾಣಪತ್ರ ನವೀಕರಣವನ್ನು 3 ವರ್ಷಗಳಿಂದ ಮಾಡದೇ ಇರುವುದರಿಂದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಪ್ರಸ್ತುತ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆದಿರುವ ಬಗ್ಗೆ ತಿಳಿಸಿದ್ದು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯಲು ಬಾಕಿ ಇರುತ್ತದೆ ಎಂದು ತಿಳಿಸಿದರು. ಕಳೆದ 3 ವರ್ಷದಿಂದ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿಯಾಗದೇ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿರುವುದು ಕೆ.ಪಿ.ಎಂ.ಇ ಕಾಯ್ದೆ ಮತ್ತು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಆದುದರಿಂದ ಈ ಪ್ರಕರಣದ ಕುರಿತು ಕೆ.ಪಿ.ಎಂ.ಇ ಕಾಯ್ದೆ 19(1)ರಂತೆ 1 ಲಕ್ಷ ರೂ.ಗಳನ್ನು ದಂಡ ವಿಧಿಸಲು…

Read More

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 4.40 ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಹಿಳಾ ದಸರಾ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 6.30 ಕ್ಕೆ ಕುದ್ರೋಳಿಯಲ್ಲಿ ನಡೆಯಲಿರುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗಿಯಾಗಿ ನಂತರ ರಾತ್ರಿ 8- ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಮುಖ್ಯಮಂತ್ರಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More