Author: navabharatha

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಪ್ರದೀಪ್ ಶೆಟ್ಟಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತ್ಯುತ್ತಮ ಜೋಡಿ ನೃತ್ಯ, ಅತ್ಯುತ್ತಮ ವೇಷಭೂಷಣ, ಅತ್ಯುತ್ತಮ ಸಮೂಹ ನೃತ್ಯ ಹಾಗೂ ಮಕ್ಕಳ ಅತ್ಯುತ್ತಮ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಅತ್ಯುತ್ತಮ ನವವಿವಾಹಿತ ಜೋಡಿ ನೃತ್ಯ ಸ್ಪರ್ಧೆ ನಡೆಯಲಿದ್ದು, 2026ರ ಅ.17ರ ವೇಳೆಗೆ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸಿದ ದಂಪತಿಗಳಿಗೆ ಮಾತ್ರ ಈ ವಿಭಾಗದಲ್ಲಿ ಭಾಗವಹಿಸಲು ಅವಕಾಶವಿದೆ ಎಂದರು. ವಿಶ್ವ ಚಾಂಪಿಯನ್ ಭಾರತದ ಮಹಿಳಾ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದ ಧನಲಕ್ಷ್ಮೀ ಪೂಜಾರಿ, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿ ಹಾಗೂ ಭರತನಾಟ್ಯದಲ್ಲಿ ವಿಶ್ವ ದಾಖಲೆ ಮಾಡಿದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ…

Read More

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ 21ರವರೆಗೆ ನಡೆಯಲಿರುವ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜನಮನ್ನಣೆ ಗಳಿಸಿರುವ ಉತ್ಸವವು ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿಯೂ ವೈಭವದ ಆಚರಣೆಗೆ ಸಜ್ಜಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ನವರಾತ್ರಿ ಹಬ್ಬವು ನಮ್ಮಲ್ಲಿರುವ ಧೈರ್ಯ, ಶಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸಿ, ನಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ದೇವಿಯ ಆರಾಧನೆಯ ಮೂಲಕ ಆಶೀರ್ವಾದ ಪಡೆದು ಜೀವನದಲ್ಲಿ ಸಕಾರಾತ್ಮಕತೆ…

Read More

ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚಿಸುತ್ತಿದ್ದೇನೆ. ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದಲೂ ಆಹ್ವಾನ ಬರುವ ನಿರೀಕ್ಷೆಯಲ್ಲಿದ್ದೇನೆ. ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು ಎಂದರು. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದಿದ್ದೇನೆ. ಬಿಜೆಪಿಯಲ್ಲಿ ಯುವ ಮೋರ್ಚಾದ ಜಿಲ್ಲಾ ಘಟಕ ಹಾಗೂ ಪಕ್ಷದ ಜಿಲ್ಲಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಮೂರು ಬಾರಿ ಶಾಸಕನಾಗಿಯೂ ಆಯ್ಕೆಯಾಗಿದ್ದೇನೆ. ಇಂತಹ ಹಿನ್ನೆಲೆಯಿರುವಾಗ ಪಕ್ಷ ಬದಲಿಸುವ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ ಮನಸ್ಸಿಗೂ ಅದು ಒಪ್ಪುವುದಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ತಪ್ಪಿದ್ದರಿಂದ ತೀವ್ರ ನೋವಾಗಿದೆ. ಬಳಿಕ…

Read More

ಮಂಗಳೂರು, ಅ. 12: ಕನ್ನಡದ ಖ್ಯಾತ ಲೇಖಕ, ವಿಮರ್ಶಕ ಹಾಗೂ ಹಿರಿಯ ಚಿಂತಕ ರೆಹಮತ್ ತರೀಕೆರೆ ಅವರು ಈ ಬಾರಿಯ ಜನನುಡಿ–2026 ಉತ್ಸವವನ್ನು ಉದ್ಘಾಟಿಸಲಿದ್ದಾರೆ. ನವೆಂಬರ್ 28 ಮತ್ತು 29ರಂದು ಮಂಗಳೂರಿನಲ್ಲಿ ಜನನುಡಿ ಉತ್ಸವ ನಡೆಯಲಿದ್ದು, ನವೆಂಬರ್ 27ರ ಶುಕ್ರವಾರ ಸಂಜೆಯಿಂದಲೇ ಪುಸ್ತಕ ಮೇಳ ಆರಂಭವಾಗಲಿದೆ ಎಂದು ಜನನುಡಿ ಬಳಗ ತಿಳಿಸಿದೆ. ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಬಹುತ್ವದ ಇತಿಹಾಸ ಹಾಗೂ ಸಾಮಾಜಿಕ ಚಿಂತನೆಗಳ ಕುರಿತು ಆಳವಾದ ಅಧ್ಯಯನ ನಡೆಸಿರುವ ರೆಹಮತ್ ತರೀಕೆರೆ ಅವರು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ವಿಶಿಷ್ಟ ಗುರುತನ್ನು ಗಳಿಸಿದ್ದಾರೆ. ಅವರ ಸಂಶೋಧನಾ ಬರಹಗಳು, ವಿಮರ್ಶಾತ್ಮಕ ದೃಷ್ಟಿಕೋನ ಹಾಗೂ ವೈಚಾರಿಕ ಚಿಂತನೆಗಳು ಸಾಹಿತ್ಯ ಲೋಕದಲ್ಲಿ ಮಹತ್ವದ ಪ್ರಭಾವ ಬೀರಿವೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಪದವಿ ಗಳಿಸಿದರು. ಬಳಿಕ ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದರು. ಹಂಪಿಯ ಕನ್ನಡ…

Read More

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಾಹನಗಳಿಗೆ ಇದೇ ಮೊದಲ ಬಾರಿಗೆ ವಿಮಾನ ನಿಲ್ದಾಣ ಪ್ರವೇಶ ಶುಲ್ಕ (Airport Access Charge) ಜಾರಿಗೆ ತರಲಾಗಿದೆ. ಈ ನಿರ್ಧಾರದಿಂದ ಟ್ಯಾಕ್ಸಿ ಪ್ರಯಾಣಿಕರ ಪ್ರಯಾಣ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್‌ ನಡೆಸಿದ ಪತ್ರಿಕಾಗೋಷ್ಠಿಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಾಣಿಜ್ಯ ವಾಹನಗಳಿಗೆ ಪ್ರವೇಶ ಶುಲ್ಕ ವಿಧಿಸುವುದು ಸಾಮಾನ್ಯ ಪದ್ಧತಿಯಾಗಿದೆ ಎಂದು ಸ್ಪಷ್ಟಪಡಿಸಿದೆ. ವಿಮಾನ ನಿಲ್ದಾಣದ ಭೂಭಾಗದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ನಿರ್ವಹಣೆ, ಭದ್ರತಾ ವ್ಯವಸ್ಥೆ ಬಲಪಡಿಸುವುದು ಹಾಗೂ ಹೆಚ್ಚುತ್ತಿರುವ ವಾಹನ ಸಂಚಾರವನ್ನು ಸಮರ್ಪಕವಾಗಿ ನಿಯಂತ್ರಿಸುವ ಉದ್ದೇಶದಿಂದ ಈ ಶುಲ್ಕವನ್ನು ಜಾರಿಗೆ ತರಲಾಗಿದೆ. ದೇಶದ ಇತರ ವಿಮಾನ ನಿಲ್ದಾಣಗಳಲ್ಲಿ ಅನುಸರಿಸಲಾಗುತ್ತಿರುವ ಪದ್ಧತಿಯನ್ನು ಪರಿಗಣಿಸಿ ಪರಿಷ್ಕೃತ ಶುಲ್ಕ ನಿಗದಿಪಡಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆ, ವಿದ್ಯುತ್ ಪೂರೈಕೆ, ಮೂಲಸೌಕರ್ಯಗಳ…

Read More

ಬೆಂಗಳೂರು: ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹ್ಯಾಂಡ್‌ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್, ಕಬಡ್ಡಿ, ಕುಸ್ತಿ ಸೇರಿದಂತೆ ಒಟ್ಟು 34 ವಿವಿಧ ಕ್ರೀಡೆಗಳಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ಅವಕಾಶ ದೊರೆಯಲಿದೆ ಎಂದು ತಿಳಿಸಲಾಗಿದೆ. ಈ ನಿರ್ಧಾರವು ವಿದ್ಯಾರ್ಥಿಗಳು ಮತ್ತು ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ವಿದ್ಯಾರ್ಥಿಗಳು ಹತ್ತನೇ ತರಗತಿಯಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಶಾಲಾ, ತಾಲೂಕು, ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಈ ಸಂದರ್ಭದಲ್ಲಿ ಕ್ರೀಡಾ ಸಾಧನೆಗೆ…

Read More

ಮಂಗಳೂರು: ನಾಟಕ ಅತ್ಯಂತ ಪರಿಣಾಮಕಾರಿ ಸಾಮಾಜಿಕ ಮಾಧ್ಯಮ. ಹಲವಾರು ಸಾಮಾಜಿಕ ಬದಲಾವಣೆಗಳಿಗೆ ನಾಟಕಗಳು ಕಾರಣವಾಗಿದೆ. ತುಳು ಭಾಷೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ರಚನೆಯಾಗಿರುವ ಪ್ರಕಾರವೂ ನಾಟಕವೇ ಆಗಿದೆ ಎಂದು ಜಾನಪದ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಹೇಳಿದರು. ಪತ್ರಕರ್ತ ರಾಜೇಶ್ ಶೆಟ್ಟಿ ದೋಟ ರಚಿಸಿರುವ ‘ಗುತ್ತೊಂಜಿ ಕತೆಯಾಂಡ್’ ನಾಟಕ ಕೃತಿಯನ್ನು ಬುಧವಾರ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ತುಳುನಾಡಿನ ಸಂಸ್ಕೃತಿಯ ಹಿರಿಮೆಯನ್ನು ಎತ್ತಿ ಹಿಡಿದ ಗುತ್ತುಗಳ ಕುರಿತು ಹಲವು ಕಾದಂಬರಿ, ನಾಟಕಗಳು ರಚನೆಯಾಗಿವೆ. ಇಲ್ಲಿನ ಸಾಂಸ್ಕೃತಿಕ, ಜಾನಪದೀಯ ದಾಖಲೀಕರಣಕ್ಕೆ ಇವು ಮಹತ್ವದ ಕೊಡುಗೆ ನೀಡಿವೆ. ಪರಂಪರೆಯನ್ನು ನಿರ್ಲಕ್ಷಿಸಿ ಆಧುನಿಕ ತಲೆಮಾರು ಮುಂದುವರಿಯುತ್ತಿರುವ ಹಾಗೂ ನೈತಿಕ ಅಧಃಪತನದತ್ತ ಮುಖಮಾಡುತ್ತಿರುವ ರೂಪಕಗಳಿಗೆ ಸಾಹಿತ್ಯದ ಮೂಲಕ ನಾಟಕದ ರೂಪ ನೀಡಿರುವುದು ಶ್ಲಾಘನೀಯ ಎಂದರು. ಕಾಲದ ಬದಲಾವಣೆ, ಸ್ಥಿತ್ಯಂತರಗಳನ್ನು ಈ ಕೃತಿ ಅತ್ಯಂತ ಸಮರ್ಥವಾಗಿ ನಿರೂಪಿಸುತ್ತದೆ. ಆಧುನೀಕತೆ ಮತ್ತು ಸಂಸ್ಕೃತಿಯ ಸಂಘರ್ಷ ಪ್ರಸ್ತುತ ಕಾಲಮಾನಕ್ಕೆ ಹೊಂದುತ್ತದೆ. ಬಿಗಿಯಾದ ಕತೆ ಹಾಗೂ ಭಾಷಾ ನಿರೂಪಣೆಯಲ್ಲಿ ಸಾಮಾಜಿಕ ಪಲ್ಲಟ, ತಲೆಮಾರುಗಳ ನಡುವಿನ…

Read More

ಕಡಬ: ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್‌ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್‌ಗಳ ತೆರಿಗೆ ವಸೂಲಾತಿ, BJYS ನೋಂದಣಿ ಪ್ರಗತಿ, ವಿಬಿ ಜಿ ರಾಮ್ ಜಿ ಯೋಜನೆಯ ಪ್ರಗತಿ, ನಿವೇಶನಕ್ಕಾಗಿ ಜಾಗ ಕಾಯ್ದಿರಿಸುವಿಕೆ ಹಾಗೂ ಆಡಿಟ್ ಪ್ಯಾರಾಗಳ ತೀರುವಳಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು. ಬಾಕಿ ಇರುವ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಗತಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಸಭೆಯ ಬಳಿಕ ಸೇವಾ ನಿವೃತ್ತಿ ಹೊಂದಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಆನಂದ ಗೌಡ, ಸ್ವಯಂ ನಿವೃತ್ತಿ ಹೊಂದಿದ ತಾಲೂಕು ಐಇಸಿ ಸಂಯೋಜಕ ಶ್ರೀ ಭರತ್ ಕುಮಾರ್ ಹಾಗೂ ವರ್ಗಾವಣೆ ಹೊಂದಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಎಂ.ಬಿ. ಮತ್ತು ಕಾರ್ಯದರ್ಶಿಗಳಾದ ಶ್ರೀ ವಸಂತ ಶೆಟ್ಟಿ, ಶ್ರೀಮತಿ ಪಮ್ಮು, ಶ್ರೀಮತಿ ಚಂದ್ರಾವತಿ ಹಾಗೂ ಶ್ರೀ ಶೀನ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು

Read More

ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಅತ್ಯಂತ ವೈಭವದಿಂದ ಜರುಗಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿದ್ದು, ಭಕ್ತಿಸಾಗರಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಕ್ಷೇತ್ರದ ಭವ್ಯ ದರ್ಬಾರ್ ಹಾಲ್‌ನಲ್ಲಿ ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ, ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಮತ್ತು ಸಮೃದ್ಧ ಜಾನಪದ ಕಲಾ ಪ್ರಕಾರಗಳು ಅನಾವರಣಗೊಳ್ಳಲಿವೆ. ಅ.11ರಂದು ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ. ಕರ್ನಾಟಕದ ವಿವಿಧ ಇಲಾಖೆಗಳ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಕಂಡುಬರುವ ಮುರ ಮಣ್ಣಿನಲ್ಲಿ ಬಾಕ್ಸೈಟ್ ಅಂಶ ಇರುವ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಭೂವೈಜ್ಞಾನಿಕ ಸಮೀಕ್ಷೆ (GSI) ಅಧಿಕಾರಿಗಳ ತಂಡ ಜಿಲ್ಲೆಗೆ ಆಗಮಿಸಿ ಸಮಗ್ರ ಪರಿಶೀಲನೆ ನಡೆಸಲಿದೆ. ಈ ಬೆಳವಣಿಗೆಯಿಂದ ಅನ್ಯ ರಾಜ್ಯಗಳ ಸಿಮೆಂಟ್ ಕಾರ್ಖಾನೆಗಳಿಗೆ ಸಾಗಿಸಲಾಗುತ್ತಿರುವ ಮುರ ಮಣ್ಣಿನ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ದೊರೆಯುವ ಮುರ ಮಣ್ಣಿನ ಕೆಂಪು ಕಲ್ಲುಗಳನ್ನು ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಸಿಮೆಂಟ್ ಉದ್ಯಮಗಳಿಗೆ ಮುರ ಮಣ್ಣಿನ ಸಾಗಾಟ ಹೆಚ್ಚಾಗಿದೆ. ಪ್ರತಿನಿತ್ಯ ನೂರಾರು ಲೋಡ್ ಮಣ್ಣು ಸಾಗಾಟವಾಗುತ್ತಿರುವ ಬಗ್ಗೆ ಸ್ಥಳೀಯವಾಗಿ ಆಕ್ಷೇಪಗಳು ವ್ಯಕ್ತವಾಗಿವೆ. ಸಾಮಾನ್ಯವಾಗಿ ಮುರ ಮಣ್ಣಿನಲ್ಲಿ 10ರಿಂದ 20 ಗ್ರೇಡ್‌ವರೆಗೆ ಇದ್ದರೆ ಕೆಂಪು ಕಲ್ಲು, 20ರಿಂದ 30 ಗ್ರೇಡ್‌ವರೆಗೆ ಇದ್ದರೆ ಲ್ಯಾಟರೈಟ್ ಮಣ್ಣು ಹಾಗೂ 30ಕ್ಕಿಂತ ಹೆಚ್ಚಿನ ಗ್ರೇಡ್‌ ಇದ್ದರೆ ಬಾಕ್ಸೈಟ್ ಎಂದು ಪರಿಗಣಿಸಲಾಗುತ್ತದೆ. ಕೊಂಪದವು…

Read More