Author: navabharatha

ಉಡುಪಿ: ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸಿಕೊಳ್ಳುವ ಮೂಲಕ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಸೇವೆಯಾಗಿದೆ. ಅದೇ ರೀತಿ, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸುವ ಮೂಲಕ ಅವರ ಆರೋಗ್ಯದ ಕಾಳಜಿ ವಹಿಸುವುದರ ಜತೆಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಶ್ಲಾಘನೀಯ ಎಂದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನಪರ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಯೋಜನೆಗಳ ಪ್ರಯೋಜನಗಳನ್ನು ಇನ್ನಷ್ಟು ಜನರಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ಹೇಳಿದರು. ಮನೆಮನೆಗೆ…

Read More

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಜಾನಪದ ವಿದ್ವಾಂಸ, ಸಾಹಿತಿ ಹಾಗೂ ಸಂಶೋಧಕ ಬನ್ನಂಜೆ ಬಾಬು ಅಮೀನ್ ಆಯ್ಕೆಯಾಗಿದ್ದಾರೆ. ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನವೆಂಬರ್ 1ರಂದು ಬೆಳಿಗ್ಗೆ 9.30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕರಾವಳಿಯಲ್ಲಿ ಜನಿಸಿ ಕನ್ನಡ ಸಾರಸ್ವತ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ ವಿಶುಕುಮಾರ್ ಅವರು ಕಥೆಗಾರ, ಕಾದಂಬರಿಕಾರ, ನಟ, ನಾಟಕಕಾರ, ಬರಹಗಾರ ಹಾಗೂ ಕನ್ನಡ ಮತ್ತು ತುಳು ಚಲನಚಿತ್ರಗಳ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಸಾಹಿತ್ಯ, ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಯುವವಾಹಿನಿ ಸಂಸ್ಥೆಯು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದೆ ಎಂದು ಅವರು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.…

Read More

ಮಂಗಳೂರು: ನಗರದ ಜನರಿಗೆ ವಿಶ್ರಾಂತಿ, ವಾಯುವಿಹಾರ ಹಾಗೂ ಮನರಂಜನೆಗೆ ಅನುಕೂಲವಾಗುವಂತೆ ಮಂಗಳೂರಿನ ಹೃದಯಭಾಗದಲ್ಲಿ ನೂತನ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವಿಶೇಷ ಆಸಕ್ತಿ ವಹಿಸಿದೆ. ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉತ್ತಮ ಉದ್ಯಾನವನಗಳ ಅಗತ್ಯವನ್ನು ಮನಗಂಡು, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಉದ್ಯಾನವನ ಅಭಿವೃದ್ಧಿಗೆ ಸೂಕ್ತ ಸ್ಥಳ ಗುರುತಿಸುವ ಉದ್ದೇಶದಿಂದ ಮಣ್ಣಗುಡ್ಡೆಯ ಸೇವಕ್ ಗಾರ್ಡನ್ ಹಾಗೂ ಮಹಾಕಾಳಿ ಪಡ್ಪು ಬಳಿಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಮುಡಾ ಆಯುಕ್ತ ಮೊಹಮ್ಮದ್ ನಜೀರ್ ಸೇರಿದಂತೆ ನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕ ಉದ್ಯಾನವನ ನಿರ್ಮಾಣಕ್ಕೆ ಸೂಕ್ತವಾದ ಸ್ಥಳಗಳ ಲಭ್ಯತೆ ಹಾಗೂ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮಂಗಳೂರಿನ ನಾಗರಿಕರಿಗೆ ಉತ್ತಮ ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಈ ಸ್ಥಳ ಪರಿಶೀಲನೆ ಮಹತ್ವ…

Read More

ಮಂಗಳೂರು:  ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ವ್ಯಾಪ್ತಿಯಲ್ಲಿ ನಿವೇಶನ ನಿರ್ಮಾಣ, ಬಡಾವಣೆ ಅಭಿವೃದ್ಧಿ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಎದುರಿಸುತ್ತಿದ್ದ ಕಾನೂನು ಅಡೆತಡೆಗಳು, ಕಚೇರಿಗಳಿಗೆ ಅಲೆದಾಟ ಮತ್ತು ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಮೂಡಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಭೂ ಪರಿವರ್ತನೆ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ. ಅನಧಿಕೃತ ವಿನ್ಯಾಸಗಳಿಗೆ ಸಂಬಂಧಿಸಿದ ಶುಲ್ಕವನ್ನು ಶೇ.15ರಿಂದ ಶೇ.1ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಮಹಾಯೋಜನೆ ವ್ಯಾಪ್ತಿಯಲ್ಲಿ ನೇರ ವಿನ್ಯಾಸ ಹಾಗೂ ಏಕ ನಿವೇಶನ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಮಯ ಮತ್ತು ಶ್ರಮದ ಉಳಿತಾಯವಾಗುವುದರ ಜತೆಗೆ, ಆರ್ಥಿಕ ಹೊರೆಯೂ ಕಡಿಮೆಯಾಗಲಿದೆ ಎಂದರು. ಈ ಬದಲಾವಣೆಗಳಿಂದ ಮೂಡಾ ವ್ಯಾಪ್ತಿಯ ಸಾರ್ವಜನಿಕರು, ರೈತರು ಹಾಗೂ ಮಧ್ಯಮ ವರ್ಗದ ಜನರಿಗೆ ಆಡಳಿತಾತ್ಮಕ ಮತ್ತು ಆರ್ಥಿಕವಾಗಿ ಅನುಕೂಲವಾಗಲಿದೆ. ನಿವೇಶನ ಖರೀದಿ, ಬಡಾವಣೆ ಅಭಿವೃದ್ಧಿ ಹಾಗೂ ಮನೆ…

Read More

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭವಾನಿಶಂಕರ್ ಎನ್. ಅವರನ್ನು ಮೂಡಬಿದಿರೆಗೆ ವರ್ಗಾವಣೆ ಮಾಡಲಾಗಿದೆ. ಶ್ರೀಯುತರು ಈ ಹಿಂದೆ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸಿದ್ದು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತಾ ನಿರ್ವಹಣೆಯಲ್ಲಿ ಅನುಭವ ಹೊಂದಿದ್ದಾರೆ. ತಮ್ಮ ಕಾರ್ಯಾವಧಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಮಲತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಿದ್ದರು. ಪ್ರತಿಯೊಂದು ಮನೆಗೂ ಶೌಚಾಲಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿಯೂ ಕಾರ್ಯನಿರ್ವಹಿಸಿದ್ದರು. ತಮ್ಮ ಕಾರ್ಯದಕ್ಷತೆ ಹಾಗೂ ಆಡಳಿತಾತ್ಮಕ ಅನುಭವದಿಂದ ಜಿಲ್ಲೆಯ ವಿವಿಧೆಡೆ ಜನರ ಮೆಚ್ಚುಗೆ ಗಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಗಳಲ್ಲಿ ಇವರ ಅನುಭವ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಹಕಾರಿಯಾಗುವ ನಿರೀಕ್ಷೆಯಿದೆ.

Read More

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಯಾಮತಿ ಎಂ. ಅವರನ್ನು ನೇಮಕ ಮಾಡಲಾಗಿದೆ. ದಯಾಮತಿ ಎಂ. ಅವರು ಈ ಹಿಂದೆ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತಾ ನಿರ್ವಹಣಾ ಕ್ಷೇತ್ರದಲ್ಲಿಯೂ ಅನುಭವ ಹೊಂದಿರುವ ಇವರು, ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ನಿರೀಕ್ಷೆಯಿದೆ.

Read More

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತದಲ್ಲಿ ಕಳೆದ ಹತ್ತು ವರ್ಷಗಳಿಂದ ನಿವೃತ್ತ ಅಧಿಕಾರಿಗಳ ಪ್ರಾಬಲ್ಯ ಹೆಚ್ಚಿದ್ದು, ಇದರಿಂದ ಪರಿಷತ್ತಿನ ಸಾಹಿತ್ಯಿಕ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಸಾಹಿತಿ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಆರೋಪಿಸಿದ್ದಾರೆ. ಕನ್ನಡ ನಾಡು, ನುಡಿ ಮತ್ತು ಸಾಹಿತ್ಯಕ್ಕಾಗಿ ಕೆಲಸ ಮಾಡಿದವರ ಕೈಗೆ ಪರಿಷತ್ತಿನ ಆಡಳಿತದ ಚುಕ್ಕಾಣಿ ನೀಡುವ ಉದ್ದೇಶದಿಂದ ಸಮಾನ ಮನಸ್ಕರ ವೇದಿಕೆಯನ್ನು ರಚಿಸಲಾಗಿದ್ದು, ಅದರ ಅಭ್ಯರ್ಥಿಯಾಗಿ ಸಾಹಿತಿ ಹಾಗೂ ನಾಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತನ್ನು ಸಾಹಿತ್ಯಿಕ ಚಟುವಟಿಕೆಗಳ ಕೇಂದ್ರವನ್ನಾಗಿ ಪುನಶ್ಚೇತನಗೊಳಿಸುವುದು ವೇದಿಕೆಯ ಪ್ರಮುಖ ಗುರಿಯಾಗಿದೆ ಎಂದರು. ‘ಕನ್ನಡ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ’ ಹಿಂದಿನ ಅಧ್ಯಕ್ಷರ ಆಡಳಿತದಲ್ಲಿ ಕನ್ನಡದ ಅಸ್ಮಿತೆಗೆ ಧಕ್ಕೆಯಾಗಿದ್ದು, ಪರಿಷತ್ತಿನಿಂದ ನಡೆಯುತ್ತಿದ್ದ ಸಾಹಿತ್ಯಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ ಎಂದು ಸಿದ್ಧರಾಮಯ್ಯ ಆರೋಪಿಸಿದರು. ಪರಿಷತ್ತಿನ ಕಾರ್ಯವೈಖರಿಯನ್ನು ಪ್ರಶ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಅವರ ಧ್ವನಿಯನ್ನು…

Read More

ಮಂಗಳೂರು: ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ನೇಮಕಗೊಂಡಿರುವ ಮಂಗಳೂರಿನ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಠಿಣ ತರಬೇತಿ, ಶೈಕ್ಷಣಿಕ ಮೇಲುಗೈ ಹಾಗೂ ವೃತ್ತಿಪರ ಬದ್ಧತೆಯ ಮೂಲಕ ಅವರು ಸಾಧಿಸಿರುವ ಈ ಹೆಗ್ಗಳಿಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 42ನೇ ರ‍್ಯಾಂಕ್ ದ್ವಿತೀಯ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ಪ್ರಜ್ವಲ್ ಶೆಟ್ಟಿ ಅವರು, ಪುಣೆಯ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ)ಯಲ್ಲಿ ಮೂರು ವರ್ಷಗಳ ಸೈನಿಕ ತರಬೇತಿ ಪಡೆದರು. ಈ ಅವಧಿಯಲ್ಲಿ ಸೂಪರ್ ಡಿಮೋನಾ ವಿಮಾನವನ್ನು ಹಾರಿಸುವ ತರಬೇತಿಯನ್ನೂ ಪಡೆದು ವೈಮಾನಿಕ ವೃತ್ತಿಗೆ ಭದ್ರ ಬುನಾದಿ ಹಾಕಿಕೊಂಡರು. ನಂತರ ಹೈದರಾಬಾದ್‌ನ ವಾಯುಪಡೆ ಅಕಾಡೆಮಿಯಲ್ಲಿ ಒಂದು ವರ್ಷದ ವೈಮಾನಿಕ ತರಬೇತಿ ಪಡೆದರು. ಪಿಲಾಟಸ್ ಮತ್ತು ಕಿರಣ್ ವಿಮಾನಗಳಲ್ಲಿ ಹಾರಾಟದ ತರಬೇತಿ ಪಡೆದ ಅವರು, ವಾಯುಯಾನ ವಿಷಯಗಳಲ್ಲಿ…

Read More

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ತೆರಳಿದ್ದ ಎಂಟು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ ಬಂದೂಕು, ಮದ್ದು-ಗುಂಡುಗಳು ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವನ್ಯಧಾಮದೊಳಗೆ ಬೇಟೆಗಾರರು ಮೂರು ಸುತ್ತು ಗುಂಡಿನ ದಾಳಿ ನಡೆಸಿದ ಶಬ್ದ ಕೇಳಿ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಆರ್‌ಎಫ್‌ಒ ತ್ಯಾಗರಾಜ್ ನೇತೃತ್ವದಲ್ಲಿ ಬೆಳಗಿನ ಜಾವ ಕಾರ್ಯಾಚರಣೆ ನಡೆಸಲಾಗಿದ್ದು, ಅರಣ್ಯದೊಳಗಿನ ರಸ್ತೆಯಲ್ಲಿ ನಿಂತಿದ್ದ ಬೇಟೆಗಾರರ ವಾಹನಗಳನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆ ವೇಳೆ ಸಿಂಗತ್ತೂರು ಗ್ರಾಮದ ವಸಂತ ಎಂಬುವರಿಗೆ ಸೇರಿದ ಒಂಟಿ ನಳಿಕೆಯ ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಪರಾರಿಯಾದ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಅನನ್ಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಧಿತರ ಬಿಡುಗಡೆಗೆ ರಾಜಕೀಯ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಬಂಧಿತ ಎಂಟು…

Read More

ತಮಿಳುನಾಡು: ತಮಿಳುನಾಡಿನ ಜೈಲೊಂದರಲ್ಲಿ ನಡೆದಿರುವ ಕೈದಿಗಳ ಸಾಮೂಹಿಕ ಪರಾರಿ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಫಿಟ್ಸ್ ಬಂದಂತೆ ನಾಟಕವಾಡಿ, ಜೈಲು ಸಿಬ್ಬಂದಿಯ ಗಮನ ಬೇರೆಡೆ ಸೆಳೆದ 17 ಕೈದಿಗಳು ಸಿನಿಮೀಯ ಶೈಲಿಯಲ್ಲಿ ಜೈಲಿನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪರಾರಿಯಾಗುವ ವೇಳೆ ಕೈದಿಗಳು ಜೈಲು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಪರಾರಿಯಾದ ಕೈದಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೈದಿಗಳ ಪತ್ತೆಗಾಗಿ ಡ್ರೋನ್‌ ತಂತ್ರಜ್ಞಾನವನ್ನೂ ಬಳಸಲಾಗಿದ್ದು, ಕಾರ್ಯಾಚರಣೆಯಲ್ಲಿ 17 ಮಂದಿಯಲ್ಲಿ 13 ಕೈದಿಗಳನ್ನು ಮತ್ತೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಉಳಿದ ಕೈದಿಗಳಿಗಾಗಿ ಶೋಧ ಮುಂದುವರಿದಿದೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ದೃಢಪಡಿಸಬೇಕಿದೆ. ತಮಿಳುನಾಡು ರಾಜ್ಯದ ಅತಿದೊಡ್ಡ ಜೈಲು ಪರಾರಿ ಪ್ರಕರಣಗಳಲ್ಲಿ ಒಂದೆಂದು ಹೇಳಲಾಗುತ್ತಿರುವ ಈ ಘಟನೆ ಜೈಲು ಭದ್ರತೆ ಹಾಗೂ ಸಿಬ್ಬಂದಿಯ ಸುರಕ್ಷತೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read More