Author: navabharatha
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಅವರನ್ನು ಸೋಲಿಸುವ ಮೂಲಕ ರಂಗನಾಥ್ ಅವರು ಕ್ಷೇತ್ರವನ್ನು ಎನ್ಡಿಎ ತೆಕ್ಕೆಗೆ ತಂದಿದ್ದಾರೆ. ಚುನಾವಣೆಯ ಮತ ಎಣಿಕೆಯಲ್ಲಿ ಎ.ಪಿ. ರಂಗನಾಥ್ ಅವರು 10,810 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 9,902 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ರಂಗನಾಥ್ ಅವರು 908 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಮತ ಎಣಿಕೆ ಕೇಂದ್ರದ ಬಳಿ ವಿಜಯೋತ್ಸವ ಬೆಂಗಳೂರಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಎನ್ಡಿಎ ಅಭ್ಯರ್ಥಿಯ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜಮಾಯಿಸಿ ಸಂಭ್ರಮಾಚರಣೆ ನಡೆಸಿದರು. ಡೊಳ್ಳು ಬಾರಿಸಿ, ಪಟಾಕಿ ಸಿಡಿಸಿ, ಬಿಜೆಪಿ ಹಾಗೂ ಜೆಡಿಎಸ್…
ಪುತ್ತೂರು, ಅ. 25: ಅಂಬೇಡ್ಕರ್ ಹೋರಾಟ ಸಮಿತಿ ಪುತ್ತೂರಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅ. 25ರ ಭಾನುವಾರ ಪುತ್ತೂರಿನ ಸೈನಿಕರ ಸ್ಮಾರಕದ ಬಳಿ ಜಿಲ್ಲಾ ದಲಿತ ಮುಖಂಡ ರಾಜು ಹೊಸ್ಮಠ ಅವರ ಮುತುವರ್ಜಿಯಲ್ಲಿ ನಡೆಯಿತು. ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ಶೋಭನಾಥ ಉಪ್ಪಿನಂಗಡಿ, ಸದಾಶಿವ ನಾಯ್ಕ ಬನ್ನೂರು ಹಾಗೂ ಚಿದಾನಂದ ನಿಡ್ಪಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶೇಖರ್ ಮಾಡಾವು, ಉಪಾಧ್ಯಕ್ಷರಾಗಿ ರಾಜು ಹೊಸ್ಮಠ, ಬಾಬು ನೆಕ್ಕರೆ ಬೆಳ್ಳಿಪ್ಪಾಡಿ ಹಾಗೂ ಸಾಂತಪ್ಪ ನರಿಮೊಗರು ಅವರನ್ನು ನೇಮಕ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಗಳಾಗಿ ಬಾಬು ಎನ್. ಸವಣೂರು ಮತ್ತು ಚಂದ್ರ ಬೀರಿಗ, ಸಹ ಕಾರ್ಯದರ್ಶಿಯಾಗಿ ಸುರೇಶ್ ಆನಡ್ಕ ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಸೇಸಪ್ಪ ನೆಕ್ಕಿಲು, ನಂದರಾಜ್, ಸಂಕೇಶ್ ಹಾಗೂ ಬಿ.ಟಿ. ಕುಮಾರ್ ಅವರನ್ನು ನೇಮಿಸಲಾಯಿತು. ಖಜಾಂಜಿಗಳಾಗಿ ಧನಂಜಯ್ ಕಬಕ ಮತ್ತು ಧರಣಿ ಕೆಯ್ಯೂರು, ಸಾಮಾಜಿಕ ಜಾಲತಾಣ ಪ್ರಚಾರಕರಾಗಿ ವಿಶ್ವನಾಥ್ ಪುಣ್ಚತ್ತಾರು ಹಾಗೂ ಪ್ರವೀಣ್ ಏಮಾಜೆ ಅವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ…
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ನಡೆದ ದುರಂತದಲ್ಲಿ ಮೂವರು ಮೀನುಗಾರರು ಮೃತಪಟ್ಟಿದ್ದು, ಮತ್ತೊಬ್ಬ ಮೀನುಗಾರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಟೊಂಕೆ ಮೀನಿನ ತೀವ್ರ ವಾಸನೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತದಡಿ ಬಂದರಿನಲ್ಲಿ ಕುಜಿಮಾ ಬೋಟ್ನಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ಹೊನ್ನಳ್ಳಿಯ ಅಮನ್ ಆಯುಧ್ ಲಂಗಡೋ (18), ಕಾಗಾಲದ ಸೌಖಾದ್ ಅಲೀಕಾ ರಾಜನ್ (35) ಹಾಗೂ ಕಾಗಾಲದ ಅಮೀರ್ ಅಬ್ದುಲ್ ಉಂಚಳ್ಳಿ (20) ಎಂದು ಗುರುತಿಸಲಾಗಿದೆ. ಇದೇ ಘಟನೆಯಲ್ಲಿ ವನ್ನಳ್ಳಿಯ ಖಾಷಿಮ್ ಅಬ್ಬಾಸ್ ಇಂಗ್ರೇಜಿ (46) ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥರಾದ ಮೀನುಗಾರರನ್ನು ಗೋಕರ್ಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಟೊಂಕೆ ಮೀನಿನ ತೀವ್ರ ವಾಸನೆ ಅಥವಾ ಅದರಿಂದ ಉಂಟಾದ ವಿಷಕಾರಿ ಅನಿಲದ ಪರಿಣಾಮವಾಗಿ ಮೀನುಗಾರರು ಅಸ್ವಸ್ಥರಾಗಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆಯ ನಿಖರ ಕಾರಣ ಇನ್ನಷ್ಟೇ…
ರೋಟರಿ ವಂದನಾ ಪ್ರಶಸ್ತಿಗೆ ಕ್ರೀಡಾಪಟು ಎಂ.ಆರ್. ಪೂವಮ್ಮ ಆಯ್ಕೆ ಅ. 30ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ | ಕ್ರೀಡಾ ಕ್ಷೇತ್ರದ ಸೇವೆ, ಸಾಧನೆಗೆ ಗೌರವ
ಮಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಗಮನಾರ್ಹ ಸಾಧನೆ ಮಾಡಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರು 2026-27ನೇ ಸಾಲಿನ ಪ್ರತಿಷ್ಠಿತ ರಾಜ್ಯ ಮಟ್ಟದ ‘ರೋಟರಿ ವಂದನಾ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಈ ಪ್ರಶಸ್ತಿಯನ್ನು ಅಕ್ಟೋಬರ್ 30ರಂದು ಸಂಜೆ 7.30ಕ್ಕೆ ಮಂಗಳೂರಿನ ಹೊಟೇಲ್ ಸೀ ವ್ಯೂವ್ನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ರೋ. ಡಾ. ದೇವದಾಸ್ ರೈ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಶಸ್ತಿಗೆ ಆಯ್ಕೆಯಾಗಿರುವ ಎಂ.ಆರ್. ಪೂವಮ್ಮ ಅವರು ಕ್ರೀಡಾ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯ ಕೊಡುಗೆ, ಸುದೀರ್ಘ ಸೇವೆ ಹಾಗೂ ಗಣನೀಯ ಸಾಧನೆಗಳನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಫಲಕ, ಪ್ರಮಾಣಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಮಾಜಿ ಒಲಿಂಪಿಕ್ ಕ್ರೀಡಾಪಟು ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ, ಪದ್ಮಶ್ರೀ ಪುರಸ್ಕೃತ ವಂದನಾ…
ರಾಮಾಯಣ ಶ್ರೇಷ್ಠತೆಗೆ ವಾಲ್ಮೀಕಿ ಕೊಡುಗೆ ಕಾರಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್
ಮಂಗಳೂರು, :- ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಶ್ರೇಷ್ಠತೆ ಪಡೆದುಕೊಳ್ಳಲು ಅದನ್ನು ಬರೆದ ಮಹರ್ಷಿ ವಾಲ್ಮೀಕಿಯವರ ಕೊಡುಗೆಯೇ ಕಾರಣವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ವಾಲ್ಮೀಕಿ ಬರಹ, ಅದನ್ನು ಪ್ರಸ್ತುತಪಡಿಸಿದ ಶೈಲಿಯಿಂದಾಗಿಯೇ ರಾಮಾಯಣವು ಶ್ರೇಷ್ಠ ಗ್ರಂಥ ಎನಿಸಿಕೊಂಡಿತು. ಈ ಗ್ರಂಥವು ನವರಸಗಳು ಇರುವ ಮಹಾಕಾವ್ಯವಾಗಿದೆ. ಕ್ರಿಸ್ತಪೂರ್ವ 5ನೇ ಶತಮಾನದಲ್ಲಿಯೇ ಇಂತಹ ಕೊಡುಗೆ ನೀಡಿದ ವಾಲ್ಮೀಕಿಯವರ ಜ್ಞಾನ ಮತ್ತು ಕೆಲಸವು ಅದ್ಭುತವಾಗಿದೆ. 7 ಕಾಂಡಗಳಲ್ಲಿ 24 ಸಾವಿರ ಶ್ಲೋಕಗಳನ್ನೂ ಬರೆಯುವ ಮೂಲಕ ಅವರು ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು. ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರು ಕಾರ್ಯಕ್ರಮ ಉದ್ಘಾಟಿಸಿ, ಪರಿಶಿಷ್ಟ ಪಂಗಡಗಳ,…
ಶಿವಮೊಗ್ಗ: ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸುವ ನಿರೀಕ್ಷೆಯಿದೆ. ಡಿಸೆಂಬರ್ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಬಹುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿಗೆ ಬಂದಿರುವ ಸುಮಾರು 1,800 ಆಕ್ಷೇಪಣೆಗಳನ್ನು ಒಂದು ವಾರದೊಳಗೆ ಪರಿಶೀಲಿಸಿ, ಈ ತಿಂಗಳೊಳಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು. ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬರ ನಿರ್ವಹಣೆಗೆ ₹306 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ನೀರು ಪೂರೈಸಲು ಸೂಚಿಸಲಾಗಿದೆ. ಸರ್ಕಾರದ ಬಳಿ ಹಣದ ಕೊರತೆಯಿಲ್ಲ; ಜನರು ಆತಂಕಪಡುವ ಅಗತ್ಯವಿಲ್ಲ ಎಂದರು. ದಸರಾ ಆನೆಗಳಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ಜಂಬೂ ಸವಾರಿಯಲ್ಲಿ ಬಳಸಬೇಕು. ಶಿವಮೊಗ್ಗದಲ್ಲಿ ನಡೆದ ಲೋಪ ಮರುಕಳಿಸದಂತೆ ಅರಣ್ಯ ಇಲಾಖೆ…
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ದೇವಸ್ಥಾನದ ಸಮೀಪ ಟಾಟಾ ಏಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಹಣಗೆರೆಕಟ್ಟೆ ದೇವಸ್ಥಾನಕ್ಕೆ ತೆರಳುತ್ತಿದ್ದ 12 ಮಂದಿ ಭಕ್ತರು ವಾಹನದಲ್ಲಿದ್ದರು ಎನ್ನಲಾಗಿದೆ. ಮಾರ್ಗಮಧ್ಯೆ ವಾಹನ ಪಲ್ಟಿಯಾದ ಪರಿಣಾಮ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗ: ರಾಜ್ಯದಲ್ಲಿ ಬರಗಾಲದಿಂದ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದ್ದರೂ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ರೈತರ ಸಮಸ್ಯೆಗಳನ್ನು ಆಲಿಸಲು ಸಮಯವಿಲ್ಲ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇನ್ನೂ ಟೇಕ್ ಆಫ್ ಆಗಿಲ್ಲ. ನಾಡಿನ ವಿವಿಧ ವರ್ಗಗಳ ಜನರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದರೂ ಅವರಿಗೆ ಸೂಕ್ತ ಪರಿಹಾರ ನೀಡುವ ಕೆಲಸವಾಗುತ್ತಿಲ್ಲ. ರೈತರಿಗೆ ತಲಾ ₹50 ಸಾವಿರ ಪರಿಹಾರ ನೀಡಬೇಕು. ಆದರೆ, ಕೇವಲ ₹2,500 ನೀಡುವುದಾಗಿ ಹೇಳಲಾಗುತ್ತಿದ್ದು, ಅದೂ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಟೀಕಿಸಿದರು. ಅಂಗವಿಕಲರ ಮಾಸಿಕ ವೇತನ ಹಾಗೂ ಹಿರಿಯ ನಾಗರಿಕರ ಪಿಂಚಣಿ ಪಾವತಿಯಲ್ಲಿಯೂ ಸಮಸ್ಯೆಗಳಿವೆ. ಯಾವುದೇ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಜನರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸ್ಟಿಂಗ್ ಆಪರೇಷನ್ ವಿಚಾರದಲ್ಲೇ ಸರ್ಕಾರ ನಿರತವಾಗಿದೆ ಎಂದು ದೂರಿದರು.…
ಉಡುಪಿ: ಕುಂದಾಪುರ ತಾಲೂಕಿನ ಶಾನಾಡಿ ಮದಗದ ಕೊರಗ ಕಾಲೋನಿಯಲ್ಲಿ ವಿಕಲಾಂಗ ಮಗಳನ್ನು ಕೊಲೆಗೈದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿ ಸುಪ್ರತಿ (14) ಕೊಲೆಯಾದ ಬಾಲಕಿ. ಅವರ ಪತ್ನಿ ನೇತ್ರಾವತಿ (40) ಆತ್ಮಹತ್ಯೆ ಮಾಡಿಕೊಂಡವರು. ಸುಧಾಕರ ಕೊರಗ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು. ದಂಪತಿಯ ಪುತ್ರಿ ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಹಾಗೂ ಕುಳಿತುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಳು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಒಂದು ವರ್ಷದ ಗಂಡು ಮಗುವೂ ಇದೆ. ಭಾನುವಾರ ಸುಧಾಕರ ಅವರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ನೇತ್ರಾವತಿ ಕತ್ತಿಯಿಂದ ಮಗಳ ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಪರಿಸ್ಥಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ತಿಳಿದು ಕೋಟ…
ಪಿಲಿಕುಳ ಮತ್ಸ್ಯೋತ್ಸವ, ಮೀನು ಆಹಾರ ಮೇಳ ಯಶಸ್ವಿ ವಿವಿಧ ಮೀನು ಖಾದ್ಯಗಳ ಸವಿರುಚಿ ಸವಿದ 2,000ಕ್ಕೂ ಹೆಚ್ಚು ಮಂದಿ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾದ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳವು ಯಶಸ್ವಿಯಾಗಿ ನಡೆಯಿತು. ಪಿಲಿಕುಳದ ವಿಶಾಲ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಗೌರಿ, ತಿಲೇಪಿಯಾ ಸೇರಿದಂತೆ ವಿವಿಧ ತಳಿಯ ಮೀನುಗಳನ್ನು ಹಿಡಿದು ಮಾರಾಟ ಮಾಡುವ ಮೂಲಕ ಸಾರ್ವಜನಿಕರಿಗೆ ಮೀನುಗಾರಿಕೆ ಮತ್ತು ಮೀನು ಖಾದ್ಯಗಳ ವೈವಿಧ್ಯತೆಯನ್ನು ಪರಿಚಯಿಸಲಾಯಿತು. ಮೇಳದಲ್ಲಿ 2,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಪರಿಸರ ಸ್ನೇಹಿ ಪ್ರವಾಸಿ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ, ಜೀವವೈವಿಧ್ಯತೆ, ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಪಿಲಿಕುಳದಲ್ಲಿ ಮೀನುಗಳ ವಿವಿಧ ಪ್ರಭೇದಗಳನ್ನು ಗುರುತಿಸಿ, ಬೆಳೆಸಿ, ಸಂತಾನೋತ್ಪತ್ತಿ ಮಾಡಿಸುವುದರ ಜೊತೆಗೆ ಅವುಗಳನ್ನು ಮೂಲ ಆವಾಸಸ್ಥಾನಕ್ಕೆ ಬಿಡುವ ಕಾರ್ಯವೂ ನಡೆಯುತ್ತಿದೆ. ಇದರ ಭಾಗವಾಗಿ ಕೆರೆಯಲ್ಲಿ ಬೆಳೆಸಿದ ಮೀನುಗಳನ್ನು ಹಿಡಿದು ಪ್ರದರ್ಶಿಸಿ, ಮಾರಾಟ ಮಾಡುವ ಮತ್ಸ್ಯೋತ್ಸವವನ್ನು ಪ್ರತಿವರ್ಷ ಆಯೋಜಿಸಲಾಗುತ್ತಿದೆ. ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ…
