Author: navabharatha

ಮೂಡುಪೆರಾರ: ನವರಂಗ್ ಫ್ರೆಂಡ್ಸ್ ಕಾಯರಣಿ, ಮೂಡುಪೆರಾರ ಇವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಾಗಿದ್ದ ದಿವಂಗತ ಪ್ರದೀಪ್ ಪೂಜಾರಿ ಅವರ ಸ್ಮರಣಾರ್ಥ ನಿರ್ಮಿಸಲಾದ ಬಸ್ ತಂಗುದಾಣವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು. ದಿವಂಗತ ಪ್ರದೀಪ್ ಪೂಜಾರಿ ಅವರ ಸ್ಮರಣಾರ್ಥ ನಿರ್ಮಿಸಿರುವ ಈ ಬಸ್ ತಂಗುದಾಣವು ಸ್ಥಳೀಯ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

Read More

ಮಂಗಳೂರು :ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ₹20 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಈ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರೀಡಾಂಗಣದ ವಿಸ್ತೃತ ಯೋಜನಾ ವರದಿ ರೂಪಿಸುವ ಕುರಿತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವುದು ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರೀತಮ್, ಕಿರಿಯ ಅಭಿಯಂತರ ಹೇಮಂತ್, ವಾಸ್ತುಶಿಲ್ಪಿ ವೆಂಕಟೇಶ್ ಪೈ, ಮಂಗಳ ಅಥ್ಲೆಟಿಕ್ ಕ್ಲಬ್‌ನ ದಿನೇಶ್ ಕುಂದರ್, ಲಾರೆನ್ಸ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರ ಪತ್ನಿ ಉಷಾಕುಮಾರಿ (56) ಅವರು ಅಸೌಖ್ಯದಿಂದ ಶನಿವಾರ ನಗರದ ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾದರು. ಮಂಗಳೂರಿನ ಉರ್ವ ಸೈಂಟ್ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಸುಮಾರು 26 ವರ್ಷಗಳ ಕಾಲ ಶಿಕ್ಷಕಿಯಾಗಿ ಅವರು ಸೇವೆ ಸಲ್ಲಿಸಿದ್ದರು . ಮಂಗಳೂರಿನ ಚಿನ್ಮಯ ಹೈಸ್ಕೂಲ್ ಮತ್ತು ಉಳ್ಳಾಲದ ಭಾರತ್ ಹೈಸ್ಕೂಲ್ ನಲ್ಲಿಯೂ ಕೆಲವು ವರ್ಷ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದರು ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ

Read More

ಮಂಗಳೂರು : ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರ ಸೇವೆ ಅನನ್ಯವಾಗಿದೆ ಎಂದು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಹೇಳಿದರು. ವಿಶ್ವ ಪೋಲಿಯೋ ದಿನಾಚರಣೆಯ ಅಂಗವಾಗಿ ರೋಟರಿ ಜಿಲ್ಲೆ 3181 ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಪೋಲಿಯೋ ಜಾಗೃತಿ ಜಾಥಾವನ್ನು ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜಯಂತಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಬೋಳಾರ್, ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಸಹಾಯಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಪೋಷಕರಲ್ಲಿ ಅರಿವು ಮೂಡಿಸುವುದರಿಂದ ಹಿಡಿದು ಆರೋಗ್ಯ ಇಲಾಖೆಯ ಲಸಿಕಾ ಅಭಿಯಾನಗಳಿಗೆ ಸಹಕರಿಸುವವರೆಗೆ ಅವರು ಸಲ್ಲಿಸುತ್ತಿರುವ ಸೇವೆ ಪೋಲಿಯೋ ನಿರ್ಮೂಲನಾ ಕಾರ್ಯಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದರು. ಪೋಲಿಯೋ ಮುಕ್ತ ಜಗತ್ತಿನ ಸಂಕಲ್ಪವನ್ನು ಸಾಕಾರಗೊಳಿಸಲು ಸರ್ಕಾರ, ಆರೋಗ್ಯ ಕಾರ್ಯಕರ್ತರು, ಸ್ವಯಂಸೇವಾ ಸಂಸ್ಥೆಗಳು ಹಾಗೂ…

Read More

ಬೆಂಗಳೂರು: ಮಗಳ ಮದುವೆಗೆ ಚಿನ್ನ ಖರೀದಿಸಬೇಕು, ಮಗುವಿನ ಭವಿಷ್ಯಕ್ಕಾಗಿ ಸ್ವಲ್ಪ ಬಂಗಾರ ಕೂಡಿಡಬೇಕು, ಹಬ್ಬಕ್ಕೆ ಮನೆಯವರಿಗೆ ಆಭರಣ ಕೊಡಿಸಬೇಕು… ಹೀಗೆ ಹಲವು ಕನಸುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಚಿನ್ನದ ಬೆಲೆ ಇಳಿಯುವುದನ್ನೇ ಕಾಯುತ್ತಿರುವ ಮಧ್ಯಮ ವರ್ಗದ ಕುಟುಂಬಗಳಿಗೆ ಬೆಲೆ ಇಳಿಕೆಯ ಸುದ್ದಿ ತುಸು ಸಮಾಧಾನ ತಂದಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕಂಡುಬರುತ್ತಿರುವ ಏರಿಳಿತದ ನಡುವೆ, ಚಿನ್ನ ಹಾಗೂ ಬೆಳ್ಳಿ ದರಗಳು ಕುಸಿದಿವೆ ಎಂಬ ಮಾಹಿತಿ ಗ್ರಾಹಕರ ಗಮನ ಸೆಳೆದಿದೆ. ವಿಶೇಷವಾಗಿ 18, 22 ಮತ್ತು 24 ಕ್ಯಾರೆಟ್ ಚಿನ್ನದ ದರಗಳಲ್ಲಿನ ಇಳಿಕೆ ಆಭರಣ ಖರೀದಿಗೆ ಯೋಜನೆ ರೂಪಿಸುತ್ತಿರುವವರಲ್ಲಿ ಆಸಕ್ತಿ ಮೂಡಿಸಿದೆ. ಬೆಲೆ ಇಳಿದರೆ ಖರೀದಿದಾರರ ಹೊರೆ ಕಡಿಮೆಯಾಗುತ್ತದೆಯೇ? ಚಿನ್ನದ ಬೆಲೆ ಏರಿಕೆಯಾದಾಗ ಮೊದಲು ತೊಂದರೆ ಅನುಭವಿಸುವುದು ಮದುವೆ ಮತ್ತು ಇತರ ಶುಭಕಾರ್ಯಗಳಿಗೆ ಆಭರಣ ಖರೀದಿಸಬೇಕಾದ ಕುಟುಂಬಗಳು. ಬಜೆಟ್‌ನಲ್ಲಿ ಹೊಂದಿಸಿಕೊಂಡ ಹಣಕ್ಕೆ ಬೇಕಾದಷ್ಟು ಚಿನ್ನ ಖರೀದಿಸಲು ಸಾಧ್ಯವಾಗದೆ, ಆಭರಣದ ತೂಕ ಅಥವಾ ವಿನ್ಯಾಸದಲ್ಲಿ ಬದಲಾವಣೆ ಮಾಡಿಕೊಳ್ಳುವ ಪರಿಸ್ಥಿತಿಯೂ ಎದುರಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಲೆ…

Read More

ಕ್ರೈಸ್ಟ್‌ಚರ್ಚ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಗಾಯದ ಆಘಾತ ಎದುರಾಗಿದೆ. ವಿಕೆಟ್‌ಕೀಪರ್‌-ಬ್ಯಾಟರ್ ಇಶಾನ್ ಕಿಶನ್ ಗಾಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬಲ ತೊಡೆಯ ಒಳಭಾಗದ ಸ್ನಾಯುವಿನಲ್ಲಿ ಸಣ್ಣ ಪ್ರಮಾಣದ ಗಾಯವಾಗಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ 15 ವರ್ಷದ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಬಹುದೇ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಯುವ ಆಟಗಾರನ ಆಯ್ಕೆಯ ಕುರಿತು ತಂಡದ ಮ್ಯಾನೇಜ್‌ಮೆಂಟ್‌ನಿಂದ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ. ಇಶಾನ್ ಕಿಶನ್ ಗಾಯದಿಂದಾಗಿ ಅಲಭ್ಯರಾಗಿರುವುದು ಖಚಿತವಾಗಿದ್ದರೂ, ಅವರ ಸ್ಥಾನಕ್ಕೆ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಭಾರತದ ಆರಂಭಿಕ ಬ್ಯಾಟಿಂಗ್ ಸಂಯೋಜನೆಯೂ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Read More

ವಾಮಂಜೂರು, ಆ. 3: ವಿದ್ಯಾರ್ಥಿ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಕೌಶಲ್ಯದ ಜೊತೆಗೆ ಕಾರ್ಯಸಾಧಿಸುವ ಮನೋಬಲವನ್ನು ಬೆಳೆಸಿಕೊಂಡರೆ ಭವಿಷ್ಯದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಾಯಿ ರಾಧಾ ಮೋಟಾರ್ಸ್‌ನ ಸರ್ವೀಸ್ ವಿಭಾಗದ ಮುಖ್ಯಸ್ಥ ಪ್ರೀತೇಶ್ ಕುಮಾರ್ ಹೇಳಿದರು. ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ಆಗಸ್ಟ್ 3ರಂದು ಆಯೋಜಿಸಲಾದ **‘ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ–2026’**ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು, ಕೌಶಲ್ಯ ಮತ್ತು ಪರಿಶ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟಿವಿಎಸ್ ಮೋಟಾರ್ ಕಂಪನಿಯ ಇವಿ ತಾಂತ್ರಿಕ ಬೆಂಬಲ ಎಂಜಿನಿಯರ್ ವೀರಣ್ಣ ಗೌಡ ಕೆ.ಎಂ. ಅವರು ಮಾತನಾಡಿ, ತಾಂತ್ರಿಕ ಶಿಕ್ಷಣದಲ್ಲಿ ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆ ಬಹಳ ಮುಖ್ಯ. ತರಬೇತಿ ಅವಧಿಯಲ್ಲಿ ಪಡೆದುಕೊಳ್ಳುವ ತಾಂತ್ರಿಕ ಜ್ಞಾನ ಹಾಗೂ ಪ್ರಾಯೋಗಿಕ ಅನುಭವವು ಮುಂದಿನ ಉದ್ಯೋಗ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ…

Read More

ಕಾಸರಗೋಡು:ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕಾಸರಗೋಡು ಇವುಗಳ ಸಹಯೋಗದಲ್ಲಿ, ಸಿರಿಗೇರಿ ಯರಿಸ್ವಾಮಿ ಅವರ ನೇತೃತ್ವದ ಅನ್ನಪೂರ್ಣ ಪಬ್ಲಿಕೇಶನ್ಸ್ ಆ್ಯಂಡ್ ಕ್ರಿಯೇಷನ್ಸ್, ಸಿರಿಗೇರಿ, ಬಳ್ಳಾರಿ ಜಿಲ್ಲೆ ಇವರ ಸಹಕಾರದೊಂದಿಗೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ನವೆಂಬರ್ 8ರಂದು ಆಯೋಜಿಸಲಾಗುವುದು. ಅಂದು ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಾವಗೀತೆಗಳ ಗಾಯನ ಹಾಗೂ ಕವಿಗೋಷ್ಠಿ ನಡೆಯಲಿದೆ. ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕವಿಗಳಿಗೆ ಕವಿಗೋಷ್ಠಿಯಲ್ಲಿ ಭಾಗವಹಿಸಲು ಹಾಗೂ ಗಾಯಕರಿಗೆ ಭಾವಗೀತೆಗಳನ್ನು ಹಾಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಕವಿಗಳು ಮತ್ತು ಗಾಯಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು  (ಮೊಬೈಲ್: 9448572016 ) ಅವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Read More

ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ 37ನೇ ವಾರ್ಷಿಕ ಮಹಾಸಭೆಯ ಸಿದ್ಧತಾ ಸಭೆಯು ಕಾಸರಗೋಡು ಕನ್ನಡ ಗ್ರಾಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಪ್ರತಿಷ್ಠಾನದ 2026-27ನೇ ಸಾಲಿನ 37ನೇ ವಾರ್ಷಿಕ ಮಹಾಸಭೆಯನ್ನು ಅಕ್ಟೋಬರ್ 25ರಂದು ಸಂಜೆ 5 ಗಂಟೆಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಯಿತು. ನವೆಂಬರ್ 1ರಂದು ಬೆಳಿಗ್ಗೆ 9.30ಕ್ಕೆ ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆಯನ್ನು ನವೆಂಬರ್ 4ರಂದು ಸಂಜೆ 4 ಗಂಟೆಗೆ ನಡೆಸಲು ತೀರ್ಮಾನಿಸಲಾಗಿದೆ.

Read More

ವಿಶ್ವಸಂಸ್ಥೆ: ಮಾನವ ಹಕ್ಕುಗಳನ್ನು ರಾಜಕೀಯ ಒತ್ತಡ ಹೇರುವ ಸಾಧನವಾಗಿ ಅಥವಾ ನಿರ್ದಿಷ್ಟ ದೇಶಗಳನ್ನು ಗುರಿಯಾಗಿಸುವ ಅಸ್ತ್ರವಾಗಿ ಬಳಸಬಾರದು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಪ್ರತಿಪಾದಿಸಿದೆ. ಪರಿಶೀಲಿಸದ ಆರೋಪಗಳು ಹಾಗೂ ಅಪೂರ್ಣ ಮಾಹಿತಿಯ ಆಧಾರದಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಚಿತ್ರಣ ಮೂಡಿಸುವ ಪ್ರಯತ್ನಗಳಿಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೂರನೇ ಸಮಿತಿಯಲ್ಲಿ ಭಾರತದ ಪರವಾಗಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಪ ಕಾರ್ಯದರ್ಶಿ ಬರ್ಖಾ ತಮ್ರಾಕರ್ ಅವರು, ಮಾನವ ಹಕ್ಕುಗಳ ವಿಚಾರದಲ್ಲಿ ಎಲ್ಲ ರಾಷ್ಟ್ರಗಳನ್ನೂ ಸಮಾನ ದೃಷ್ಟಿಯಿಂದ ನೋಡಬೇಕು ಎಂದು ಹೇಳಿದರು. ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವ್ಯವಸ್ಥೆಯೊಂದಿಗೆ ದೇಶಗಳು ನಡೆಸುವ ಸಹಕಾರವು ಪರಸ್ಪರ ಸಂವಾದ, ಸಮಾಲೋಚನೆ, ಸಹಕಾರ, ತಾರತಮ್ಯರಹಿತ ಧೋರಣೆ ಮತ್ತು ಪಾರದರ್ಶಕತೆಯನ್ನು ಆಧರಿಸಿರಬೇಕು ಎಂದು ಅವರು ಅಭಿಪ್ರಾಯಪಟ್ಟರು. ಸಂವಿಧಾನ, ನ್ಯಾಯಾಂಗದ ಮೇಲೆ ಭಾರತದ ವಿಶ್ವಾಸ ಭಾರತವು ಕಾನೂನಿನ ಆಳ್ವಿಕೆಗೆ ಬದ್ಧವಾಗಿದ್ದು, ಸಂವಿಧಾನ ಮತ್ತು ಸ್ವತಂತ್ರ ನ್ಯಾಯಾಂಗವು ನಾಗರಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಭಾರತ ತಿಳಿಸಿದೆ. ಸಂವಿಧಾನದ…

Read More