Author: navabharatha

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಯ ಕಲ್ಯಾಣ ಹಾಗೂ ಕಾರ್ಯದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ವೀರ್ ಸದನ್’ ಹೆಸರಿನ ನೂತನ ವಸತಿ ನಿಲಯವನ್ನು ಸೋಮವಾರ ಉದ್ಘಾಟಿಸಲಾಯಿತು. CISF ಮಹಾನಿರ್ದೇಶಕ ಪ್ರವೀರ್ ರಂಜನ್ ಅವರು ಮಂಗಳೂರಿನ ಸಮೀಪದ ಕೈಕಂಬದ ಆದ್ಯಪಾಡಿ ರಸ್ತೆಯಲ್ಲಿರುವ ವಿಮಾನ ನಿಲ್ದಾಣ ಭದ್ರತಾ ಗುಂಪಿನ (ASG) ಸಿಬ್ಬಂದಿಗಾಗಿ ನಿರ್ಮಿಸಲಾದ ನೂತನ ಬ್ಯಾರಕ್‌ ಅನ್ನು ಉದ್ಘಾಟಿಸಿದರು. ವಿಮಾನ ನಿಲ್ದಾಣ ಹಾಗೂ ಪ್ರಯಾಣಿಕರ ಸುರಕ್ಷತೆಯ ಹೊಣೆ ಹೊತ್ತಿರುವ CISF ಸಿಬ್ಬಂದಿಗೆ ಸುರಕ್ಷಿತ, ಆರಾಮದಾಯಕ ಮತ್ತು ಆಧುನಿಕ ವಸತಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ವಿಶೇಷವಾಗಿ ಅವಿವಾಹಿತ ಸಿಬ್ಬಂದಿಯ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ವಸತಿ ನಿಲಯವನ್ನು ನಿರ್ಮಿಸಲಾಗಿದೆ. ವೀರ್ ಸದನ್‌ನಲ್ಲಿ ಸುಸಜ್ಜಿತ ಕೊಠಡಿಗಳು, ಮನರಂಜನೆ ಮತ್ತು ಸಾಮಾನ್ಯ ಬಳಕೆಯ ಸ್ಥಳಗಳು, ಊಟದ ವ್ಯವಸ್ಥೆ, ನೈರ್ಮಲ್ಯ ಸೌಲಭ್ಯಗಳು, ಕುಡಿಯುವ ನೀರು ಸೇರಿದಂತೆ ಸಿಬ್ಬಂದಿಯ ದೈನಂದಿನ ಅಗತ್ಯಗಳಿಗೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಿಬ್ಬಂದಿಯ ಆರಾಮ,…

Read More

ಮಂಗಳೂರು: ಅರ್ಚನಾ (35) ಎಂಬವರು ಕೆಲಸಕ್ಕೆಂದು ಮನೆಯಿಂದ ತೆರಳಿದವರು ವಾಪಸ್ ಬಾರದೆ, ಸೆಪ್ಟೆಂಬರ್ 17ರಂದು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರ್ಚನಾ ಅವರು ರಾಘವೇಂದ್ರ (42) ಎಂಬವರೊಂದಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಕಾಣೆಯಾದವರ ಚಹರೆ: ಸುಮಾರು 5 ಅಡಿ ಎತ್ತರ, ದುಂಡು ಮುಖ, ದಪ್ಪ ಶರೀರ ಹಾಗೂ ಬಿಳಿ ಮೈಬಣ್ಣ ಹೊಂದಿದ್ದಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ಮಂಗಳೂರು ನಗರದ ವಿವಿಧ ವಾರ್ಡ್‌ಗಳಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ನಾಗರಿಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಯೋಜಿಸಲಾಗುವ ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮವು ಅಕ್ಟೋಬರ್ 29ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸುರತ್ಕಲ್‌ನ ಹೊಸಬೆಟ್ಟು ಪ್ರದೇಶದ ವಾರ್ಡ್ ಸಂಖ್ಯೆ 8ರಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಅಕ್ಟೋಬರ್ 26ರಂದು ಬೆಳಿಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಮಂಗಳೂರು,: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಪ್ರವಾಸೋದ್ಯಮ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ 8.30ಕ್ಕೆ ಪಿಲಿಕುಳ ಲೇಕ್ ಗಾರ್ಡನ್‌ನಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ನಡೆಯಲಿದೆ. ಮೇಳದ ಅಂಗವಾಗಿ ಬೆಳಿಗ್ಗೆ 8.30ರಿಂದ ಪಿಲಿಕುಳ ಕೆರೆಯಲ್ಲಿ ಬೆಳೆಸಿದ ಮೀನುಗಳನ್ನು ದಾಸ್ತಾನು ಇರುವವರೆಗೆ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಇಲಾಖೆಯ ವತಿಯಿಂದ ರೋಹು, ಕಟ್ಲಾ, ತಿಲಾಪಿಯಾ ಸೇರಿದಂತೆ ವಿವಿಧ ತಳಿಗಳ ಮೀನು ಮರಿಗಳನ್ನು ಪಿಲಿಕುಳ ಕೆರೆಗೆ ಬಿಡಲಾಗುತ್ತದೆ. ಮೇಳದಲ್ಲಿ ಮೀನು ಆಹಾರ ಮಳಿಗೆಗಳನ್ನು ತೆರೆಯಲಾಗಿದ್ದು, ಸ್ಥಳದಲ್ಲೇ ತಯಾರಿಸಿದ ಸಿಹಿನೀರಿನ ಮೀನು ಹಾಗೂ ಸಮುದ್ರದ ಮೀನಿನ ಖಾದ್ಯಗಳ ಜೊತೆಗೆ ಮೌಲ್ಯವರ್ಧಿತ ಮೀನು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಂಗಳೂರು:- ಉಳ್ಳಾಲ ತಾಲೂಕಿನ  ಮಹಾತ್ಮ ಗಾಂಧಿ ಕಿನ್ಯಾ ಗ್ರಾಮ ಪಂಚಾಯತ್ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಅಕ್ಟೋಬರ್ 31 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಾಹನ ಚಾಲಕರ ಜಿಲ್ಲಾ ಕೇಂದ್ರ ಸಂಘದ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಗಣಹೋಮ ಹಾಗೂ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವೆನ್‌ಲಾಕ್ ಆಸ್ಪತ್ರೆಯ ಯುರೋ ಸರ್ಜನ್ ಡಾ. ಸದಾನಂದ ಪೂಜಾರಿ, ನ್ಯಾಯವಾದಿ ರಾಜು ದೇವಾಡಿಗ, ನ್ಯಾಯಾಂಗ ಇಲಾಖೆಯ ಹಿರಿಯ ಶಿರಸ್ತೇದಾರ್ ಪ್ರಕಾಶ್ ನಾಯಕ್, ಸಂಘದ ಅಧ್ಯಕ್ಷ ತಿಲಕ್ ಪ್ರಶಾಂತ್, ಗೌರವಾಧ್ಯಕ್ಷ ಅರುಣಕಾಂತ, ಕಾರ್ಯದರ್ಶಿ ಅವಿನಾಶ್, ಖಜಾಂಚಿ ಪುರುಷೋತ್ತಮ, ಜೊತೆ ಕಾರ್ಯದರ್ಶಿ ಸತೀಶ್, ಕಾನೂನು ಸಲಹೆಗಾರ ಕೆ. ಮೋನಪ್ಪ ಭಂಡಾರಿ, ಮಾಜಿ ಅಧ್ಯಕ್ಷ ಬಿ. ವಿಶ್ವನಾಥ ಶೆಟ್ಟಿ ಹಾಗೂ ತೋಟಗಾರಿಕಾ ಇಲಾಖೆಯ ನಿವೃತ್ತ ಸಿಬ್ಬಂದಿ ಸಿರಿಲ್ ರಾಬರ್ಟ್ ಡಿಸೋಜಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ನೀರು ರಸ್ತೆಗಳ ಮೇಲೆ ಹರಿದು ಸಂಚಾರ ವ್ಯವಸ್ಥೆಗೆ ತೊಂದರೆ ಉಂಟಾಯಿತು. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಮೂಡುಬಿದಿರೆ ಹಾಗೂ ಕಡಬ ತಾಲೂಕಿನ ಸುತ್ತಮುತ್ತ ಮಳೆಯ ತೀವ್ರತೆ ಹೆಚ್ಚಾಗಿತ್ತು. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಕಷ್ಟ ಎದುರಿಸುವಂತಾಯಿತು. ಹೆದ್ದಾರಿಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ಅಡ್ಡಿ ಬೆದ್ರೋಡಿಯಿಂದ ಕಾಂಚನ ಕ್ರಾಸ್‌ವರೆಗಿನ ಪ್ರದೇಶದಲ್ಲಿ ಅಲ್ಲಲ್ಲಿ ಹೆದ್ದಾರಿಗೆ ಮಳೆ ನೀರು ನುಗ್ಗಿ ರಸ್ತೆ ಮೇಲೆ ಹರಿದಿದೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಹೆದ್ದಾರಿ ಬದಿಯ ಚರಂಡಿಗಳು ತುಂಬಿ ಹರಿದ ಪರಿಣಾಮ ಹೆಚ್ಚುವರಿ ನೀರು ರಸ್ತೆಯ ಮೇಲೆ ಹರಿದು ವಾಹನ ಸವಾರರ ಆತಂಕಕ್ಕೆ ಕಾರಣವಾಯಿತು. ರಸ್ತೆಯ ಮೇಲೆ ನೀರು…

Read More

ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಕುರಿತ ಚರ್ಚೆಗಳ ನಡುವೆಯೇ ರಘುಪತಿ ಭಟ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಅವರು, ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬುದರ ಬಗ್ಗೆ ಇನ್ನೂ ತಮ್ಮ ನಿಲುವನ್ನು ಪ್ರಕಟಿಸಿಲ್ಲ.

Read More

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಕೆನರಾ ಬ್ಯಾಂಕ್‌ನ ಉಡುಪಿ ಪ್ರಾದೇಶಿಕ ಕಚೇರಿಯ ವತಿಯಿಂದ ಅ. 24 ಮತ್ತು 25ರಂದು ಉಡುಪಿಯ ಎಂಜಿಎಂ ಕಾಲೇಜಿನ ಮೈದಾನದಲ್ಲಿ ‘ಕೆನರಾ ರಿಟೇಲ್ ಮೇಳ-2026’ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಣಿಪಾಲ ವೃತ್ತ ಕಚೇರಿಯ ಪ್ರಧಾನ ವ್ಯವಸ್ಥಾಪಕ ಎಚ್. ಗಂಗಾಧರ್ ತಿಳಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳವು ಎರಡೂ ದಿನ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದರು. ಮೇಳದಲ್ಲಿ ಯಾವುದೇ ನಿರ್ವಹಣಾ ಶುಲ್ಕವಿಲ್ಲದೆ ಸ್ಥಳದಲ್ಲೇ ಸಾಲ ಮಂಜೂರಾತಿಗೆ ಅವಕಾಶ ಕಲ್ಪಿಸಲಾಗುವುದು. ಶೇ. 7.4ರ ಬಡ್ಡಿದರದಲ್ಲಿ ಗೃಹ ಸಾಲ ಹಾಗೂ ಶೇ. 7.70ರ ಬಡ್ಡಿದರದಲ್ಲಿ ವಾಹನ ಸಾಲ ಸೌಲಭ್ಯ ಲಭ್ಯವಿರಲಿದೆ. ವಿವಿಧ ಪ್ರಮುಖ ಕಂಪನಿಗಳ ಅಧಿಕೃತ ಡೀಲರ್‌ಗಳು ಮೇಳದಲ್ಲಿ ಭಾಗವಹಿಸಲಿದ್ದು, ಗ್ರಾಹಕರು ತಮಗೆ ಅಗತ್ಯವಿರುವ ವಾಹನಗಳು ಹಾಗೂ ಇತರ ಉತ್ಪನ್ನಗಳ ಕುರಿತು ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಸಾಲ ಪಡೆಯಲು…

Read More